ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ.
ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ:
ಈ ನಿರ್ಧಾರದಿಂದ 5 ವರ್ಷ 10 ತಿಂಗಳು ಅಥವಾ ಅದರ ಮೇಲೆ ವಯಸ್ಸಾಗಿರುವ ಮಕ್ಕಳೂ ಸಹ ಈ ವರ್ಷ ಒಂದನೇ ತರಗತಿಗೆ ದಾಖಲಾಗಬಹುದು. ಈ ಸಡಿಲಿಕೆ ಎಲ್‌ಕೆಜಿ, ಯುಕೆಜಿ, ಒಂದನೇ ತರಗತಿಗೆ ಅನ್ವಯವಾಗಲಿದೆ.
ಮಕ್ಕಳ ಪೋಷಕರು ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದರು. ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಮನೆಗಳಿಗೆ ಪದೇಪದೇ ಹೋಗಿ ಒತ್ತಾಯ ಮಾಡುತ್ತಿದ್ದರು. ಈಗ ಸರ್ಕಾರದ ನಿರ್ಧಾರದಿಂದ ಈ ಮಕ್ಕಳ ಪೋಷಕರು ನಿಟ್ಟುಸಿರು ಬಿಡುವಂತಾಗಿದೆ.
ಪ್ರತೀ ಬಾರಿಯೂ ಈ ಸಮಸ್ಯೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ಕಾನೂನು ತಂದು ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಇದುವರೆಗೆ ಎಲ್‌ಕೆಜಿ, ಯುಕೆಜಿಗೆ ರೆಗ್ಯುಲೇಟರಿ ನಿಯಮ ಇರಲಿಲ್ಲ. ಇದಕ್ಕಾಗಿ ಹೊಸ ಕಾನೂನು ತಂದು ಎಲ್‌ಕೆಜಿ, ಯುಕೆಜಿಯಲ್ಲೇ ದಾಖಲಾತಿಗೆ ವಯೋಮಿತಿ ನಿಗದಿ ಮಾಡಿ ಸ್ಪಷ್ಟತೆ ಕೊಡಲಾಗುವುದು. ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ಮಂಡನೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…