ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.
ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.
ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ.
ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…