Featured

1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ; ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ !!

ಹೊಸದಿಲ್ಲಿ: ಕೇಂದ್ರ ಸರ್ಕಾರವು ಮಕ್ಕಳಿಗೆ ಹೋಂವರ್ಕ್ ಕೊಡುವ ಹಾಗೂ ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ವಿಚಾರದಲ್ಲಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

ಶಾಲಾ ಮಕ್ಕಳ ಬ್ಯಾಗಿನ ಹೊರೆ ಇಳಿಸುವ ಹಾಗೂ ಮಕ್ಕಳಿಗೆ ಹೋಂವರ್ಕ್ ಕೊಡುವ ವಿಚಾರದಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತಮ್ಮ ಮಾರ್ಗದರ್ಶಿ ಸೂತ್ರ ಪಾಲಿಸುವಂತೆ ನಿರ್ದೇಶನ ನೀಡಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು 1 ಮತ್ತು 2 ನೇ ತರಗತಿಯ ಮಕ್ಕಳ ಬ್ಯಾಗಿನ ತೂಕ ಒಂದೂವರೆ ಕೆಜಿಯಷ್ಟು ಮಾತ್ರ ಇರಬೇಕು ಎಂದು ನಿರ್ದೇಶಿಸಿದೆ.

ಇದೇ ರೀತಿ, 3 ಮತ್ತು 5 ನೇ ತರಗತಿಯ ಮಕ್ಕಳಿಗೆ 2 – 3 ಕೆ.ಜಿ, 6 ರಿಂದ 7 ನೇ ತರಗತಿಯ ಮಕ್ಕಳಿಗೆ 4 ಕೆಜಿ, 8 ಮತ್ತು 9 ನೇ ತರಗತಿಯ ಮಕ್ಕಳಿಗೆ ನಾಲ್ಕೂವರೆ ಕೆಜಿ ಹಾಗೂ 10 ನೇ ತರಗತಿಯ ಮಕ್ಕಳಿಗೆ ಐದು ಕೆಜಿ ಬ್ಯಾಗ್ ತೂಕ ಮೀರುವಂತಿಲ್ಲ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಮಾರ್ಗದರ್ಶಿ ಸೂತ್ರದಲ್ಲಿ ತಿಳಿಸಿದೆ. 

ಅಲ್ಲದೆ, ಶಿಕ್ಷಕರು 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಹೋಂ ವರ್ಕ್ ಕೊಡುವಂತಿಲ್ಲ ಎಂದೂ ಸೂಚನೆ ನೀಡಿದೆ. ಇನ್ನು, 1 ಮತ್ತು 2 ನೇ ತರಗತಿಯ ಶಾಲಾ ಮಕ್ಕಳಿಗೆ ಗಣಿತ ಹಾಗೂ ಭಾಷಾ ವಿಷಯಗಳನ್ನು ಮಾತ್ರ ನಿಗದಿ ಮಾಡಬೇಕು. ಹಾಗೂ, 3 ಮತ್ತು 4 ನೇ ತರಗತಿ ಓದುತ್ತಿರುವ ಮಕ್ಕಳಿಗೆ ಗಣಿತ, ಭಾಷೆ ಹಾಗೂ ಇವಿಎಸ್‌ ಭಾಷೆಗಳನ್ನು ಮಾತ್ರ ನಿಗದಿ ಮಾಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೂಚಿಸಿದೆ.

ಕೇಂದ್ರ ಸರಕಾರದ ಈ ಸೂಚನೆಗಳನ್ನು ಹೊರತುಪಡಿಸಿ ಶಾಲೆಗಳು ಮಕ್ಕಳಿಗೆ ಅಗತ್ಯಕ್ಕಿಂತ ಹೆಚ್ಚು ಪುಸ್ತಕಗಳನ್ನು ತರಲು ಹೇಳಬಾರದು. ಹಾಗೂ ಬ್ಯಾಗಿನ ತೂಕ ಹೆಚ್ಚದಂತೆ ನೋಡಿಕೊಳ್ಳಬೇಕು ಎಂದೂ ಸೂಚಿಸಿದೆ.
Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

7 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

8 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

10 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

10 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

11 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

11 hours ago