ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆ ಪ್ರಸಕ್ತ ಶೈಕ್ಷಣಿಕ ವರ್ಷದ ಭೌತಿಕ ತರಗತಿಗಳನ್ನು ಆರಂಭಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಜುಲೈ 1 ರಿಂದ ಆನ್ ಲೈನ್ ತರಗತಿಗಳ ಮೂಲಕ ಶೈಕ್ಷಣಿಕ ವರ್ಷ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ 1 ರಿಂದ 1 ರಿಂದ 10 ನೇ ತರಗತಿವರೆಗೆ ಚಂದನ ವಾಹಿನಿಯಲ್ಲಿ ತರಗತಿ ಆರಂಭಿಸಲಾಗುತ್ತದೆ. ಶಿಕ್ಷಣ ಇಲಾಖೆ ಅಭಿವೃದ್ಧಿ ಪಡಿಸಿರುವ ದೀಕ್ಷಾ ಪೋರ್ಟಲ್ ನಲ್ಲಿ ಆಡಿಯೋ ಮತ್ತು ವಿಡಿಯೋ ಸಹಿತ 22 ಸಾವಿರ ವಿಷಯಗಳು ಇದರಲ್ಲಿವೆ. ಸಿಬಿಎಸ್ ಸಿ ಮಾದರಿಯಲ್ಲೇ ತರಗತಿ ನಡೆಸಲು ಆನ್ ಲೈನ್ ತರಗತಿ ಬೋಧನೆ ಮಾಡುವ ಸಂಬಂಧ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಮಕ್ಕಳವಾಣಿ ಯೂಟ್ಯೂಬ್ ಚಾನೆಲ್ ನಲ್ಲಿಯೂ ಪಾಠಗಳು ಲಭ್ಯವಿರಲಿವೆ. ಜುಲೈ 1 ರಿಂದ 1 ತಿಂಗಳ ಕಾಲ ಹಿಂದಿನ ವರ್ಷದ ತರಗತಿಗಳನ್ನು ಪುನರ್ ಮನನ ಮಾಡುವುದಕ್ಕಾಗಿ ಸೇತುಬಂಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…