Featured

10 ಲಕ್ಷ ಕೋಟಿ ರೂ. ದಾಟಿದ ಅಂಬಾನಿ ನೇತೃತ್ವದ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ , ಐತಿಹಾಸಿಕ ಸಾಧನೆ ಸೃಷ್ಟಿಸಿದ ದೇಶದ ಮೊದಲ ಕಂಪನಿ -Vishwanews24

ಮುಂಬಯಿ: ಮುಖೇಶ್‌ ಅಂಬಾನಿ ನೇತೃತ್ವದ ರಿಲಯನ್ಸ್‌ ಇಂಡಸ್ಟ್ರೀಸ್‌ ಲಿ. (ಆರ್‌ಐಎಲ್‌) ಮಾರುಕಟ್ಟೆ ಮೌಲ್ಯ ಗುರುವಾರ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಈ ಮೂಲಕ ಈ ಸಾಧನೆ ಮೆರೆದ ಭಾರದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಆರ್‌ಐಎಲ್‌ ಪಾತ್ರವಾಗಿದೆ.

ಗುರುವಾರ ರಿಲಯನ್ಸ್ ಷೇರು ಸಾರ್ವಕಾಲಿಕ ಗರಿಷ್ಠ 1,581 ರೂ. ತಲುಪುವ ಮೂಲಕ ಮಾರುಕಟ್ಟೆ ಮೌಲ್ಯ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. 2019ರಲ್ಲಿ ರಿಲಯನ್ಸ್ ಷೇರು ಶೇ. 40ರಷ್ಟು ಏರಿಕೆ ಕಂಡಿದ್ದರೆ ಇಂದು ಶೇ.0.70ರಷ್ಟು ಏರಿಕೆ ಕಂಡಿದ್ದರಿಂದ ಈ ದಾಖಲೆ ನಿರ್ಮಾಣವಾಗಿದೆ.

ಸೌದಿ ಅರಾಮ್ಕೋ ಕಂಪನಿಯ ಜೊತೆಗೆ ರಿಲಯನ್ಸ್ ಒಪ್ಪಂದ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಜಿಯೋ ತನ್ನ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ಹೇಳಿತ್ತು. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ ಕಂಡು ಬಂದಿದ್ದು ಹೂಡಿಕೆದಾರರು ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿದ್ದರಿಂದ ರಿಲಯನ್ಸ್ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.

ಗುರುವಾರ ಬೆಳಿಗ್ಗೆ 10 ಗಂಟೆ 10 ನಿಮಿಷದ ವೇಳೆಗೆ ಬಾಂಬೆ ಷೇರು ಮಾರುಕಟ್ಟೆಯಲ್ಲಿ ಆರ್‌ಐಎಲ್‌ ಷೇರುಗಳು 1,579 ರೂ.ಗೆ ಮಾರಾಟವಾಗುತ್ತಿದ್ದವು. ಈ ವೇಳೆ ಕಂಪನಿಯ ಮಾರುಕಟ್ಟೆ ಮೌಲ್ಯ ಕೂಡ 10 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿತ್ತು.

ಕಳೆದ ವಾರ ಕಂಪನಿಯ ಮಾರುಕಟ್ಟೆ ಮೌಲ್ಯ 9.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿತ್ತು. ಕಚ್ಛಾ ತೈಲದಿಂದ ಟೆಲಿಕಾಂ ಕ್ಷೇತ್ರದವರೆಗೆ ಹರಡಿಕೊಂಡಿರುವ ಕಂಪನಿಯ ಮಾರುಕಟ್ಟೆ ಮೌಲ್ಯ ಅಕ್ಟೋಬರ್‌ 18ರಂದು 9 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿತ್ತು. ಅಲ್ಲಿಂದ ತನ್ನ ಮಾರುಕಟ್ಟೆ ಮೌಲ್ಯವನ್ನು ಒಂದು ಲಕ್ಷ ಕೋಟಿ ರೂಪಾಯಿಯಷ್ಟು ಹೆಚ್ಚಿಸಿಕೊಳ್ಳಲು ಕಂಪನಿ ಒಂದಕ್ಕಿಂತ ಹೆಚ್ಚು ತಿಂಗಳು ತೆಗೆದುಕೊಂಡಿದೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

8 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago