ಮುಂಬಯಿ: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿ. (ಆರ್‌ಐಎಲ್) ಮಾರುಕಟ್ಟೆ ಮೌಲ್ಯ ಗುರುವಾರ 10 ಲಕ್ಷ ಕೋಟಿ ರೂಪಾಯಿ ದಾಟಿದೆ. ಈ ಮೂಲಕ ಈ ಸಾಧನೆ ಮೆರೆದ ಭಾರದ ಮೊದಲ ಕಂಪನಿ ಎಂಬ ಹೆಗ್ಗಳಿಕೆಗೆ ಆರ್‌ಐಎಲ್ ಪಾತ್ರವಾಗಿದೆ.
ಗುರುವಾರ ರಿಲಯನ್ಸ್ ಷೇರು ಸಾರ್ವಕಾಲಿಕ ಗರಿಷ್ಠ 1,581 ರೂ. ತಲುಪುವ ಮೂಲಕ ಮಾರುಕಟ್ಟೆ ಮೌಲ್ಯ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. 2019ರಲ್ಲಿ ರಿಲಯನ್ಸ್ ಷೇರು ಶೇ. 40ರಷ್ಟು ಏರಿಕೆ ಕಂಡಿದ್ದರೆ ಇಂದು ಶೇ.0.70ರಷ್ಟು ಏರಿಕೆ ಕಂಡಿದ್ದರಿಂದ ಈ ದಾಖಲೆ ನಿರ್ಮಾಣವಾಗಿದೆ.
ಸೌದಿ ಅರಾಮ್ಕೋ ಕಂಪನಿಯ ಜೊತೆಗೆ ರಿಲಯನ್ಸ್ ಒಪ್ಪಂದ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಜಿಯೋ ತನ್ನ ಕರೆ ಮತ್ತು ಡೇಟಾ ದರಗಳನ್ನು ಏರಿಸುವುದಾಗಿ ಹೇಳಿತ್ತು. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಉತ್ಸಾಹ ಕಂಡು ಬಂದಿದ್ದು ಹೂಡಿಕೆದಾರರು ಷೇರುಗಳನ್ನು ಖರೀದಿಸಲು ಆಸಕ್ತಿ ತೋರಿದ್ದರಿಂದ ರಿಲಯನ್ಸ್ ಭಾರತದಲ್ಲಿ ಹೊಸ ಇತಿಹಾಸ ಸೃಷ್ಟಿಸಿದೆ.
ಕಳೆದ ವಾರ ಕಂಪನಿಯ ಮಾರುಕಟ್ಟೆ ಮೌಲ್ಯ 9.5 ಲಕ್ಷ ಕೋಟಿ ರೂಪಾಯಿಗಳನ್ನು ದಾಟಿತ್ತು. ಕಚ್ಛಾ ತೈಲದಿಂದ ಟೆಲಿಕಾಂ ಕ್ಷೇತ್ರದವರೆಗೆ ಹರಡಿಕೊಂಡಿರುವ ಕಂಪನಿಯ ಮಾರುಕಟ್ಟೆ ಮೌಲ್ಯ ಅಕ್ಟೋಬರ್ 18ರಂದು 9 ಲಕ್ಷ ಕೋಟಿ ರೂಪಾಯಿಗಳನ್ನು ತಲುಪಿತ್ತು. ಅಲ್ಲಿಂದ ತನ್ನ ಮಾರುಕಟ್ಟೆ ಮೌಲ್ಯವನ್ನು ಒಂದು ಲಕ್ಷ ಕೋಟಿ ರೂಪಾಯಿಯಷ್ಟು ಹೆಚ್ಚಿಸಿಕೊಳ್ಳಲು ಕಂಪನಿ ಒಂದಕ್ಕಿಂತ ಹೆಚ್ಚು ತಿಂಗಳು ತೆಗೆದುಕೊಂಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…