Featured

10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ – vishwanews24

10 ವರ್ಷದ ಬಳಿಕ ಮತ್ತೆ ಚಾಲುಕ್ಯ ಉತ್ಸವ ಆರಂಭ : ಜ. 19 ರಂದು ಚಾಲನೆ

ಬಾಗಲಕೋಟೆ :10 ವರ್ಷದ ಬಳಿಕ ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನಿಸಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ಸವದ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜನವರಿ 19ರಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. 20ರಂದು ಪಟ್ಟದಕಲ್ಲಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.

ಉತ್ಸವದ ಅಂಗವಾಗಿ ಕುಸ್ತಿ, ಕಬಡ್ಡಿ, ಸಂಗಿರಾಣಿ ಕಲ್ಲು ಎತ್ತುವ ಸ್ಪರ್ಧೆ, ರಾಕ್ ಕ್ಲೈಂಬಿಂಗ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಖ್ಯಾತ ಸಂಗೀತ ನಿರ್ದೇಶಕರು ಮತ್ತು ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಗಾಯಕ ವಿಜಯ್ ಪ್ರಕಾಶ್ ಹಾಗೂ ಸಂಚಿತ್ ಹೆಗಡೆ ಅವರ ತಂಡಗಳು ಮನರಂಜನೆ ನೀಡಲಿವೆ.

ಸ್ಥಳೀಯ ದೇಶಿ ಹಾಗೂ ಜನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬಾದಾಮಿ ಐತಿಹಾಸಿಕ ಸ್ಥಳಗಳ ವೀಕ್ಷಣೆಗೆ ಹೆಲಿಕಾಪ್ಟರ್ ಮೂಲಕ ಹೆಲಿಟೂರಿಸಂ ವ್ಯವಸ್ಥೆಯನ್ನೂ ಆಯೋಜಿಸಲಾಗುತ್ತದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago