ಬಾಗಲಕೋಟೆ :10 ವರ್ಷದ ಬಳಿಕ ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಮತ್ತೆ ಆಚರಿಸಲು ಸರ್ಕಾರ ಮಹತ್ವದ ತೀರ್ಮಾನಿಸಿದೆ. ಜನವರಿ 19, 20 ಮತ್ತು 21ರಂದು ಬಾದಾಮಿ, ಪಟ್ಟದಕಲ್ಲು ಹಾಗೂ ಐಹೊಳೆಯಲ್ಲಿ ಮೂರು ದಿನಗಳ ಕಾಲ ಉತ್ಸವ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.
ನಗರದ ಖಾಸಗಿ ಹೋಟೆಲ್‌ನಲ್ಲಿ ಉತ್ಸವದ ಪೂರ್ವಭಾವಿ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಜನವರಿ 19ರಂದು ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಚಾಲುಕ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. 20ರಂದು ಪಟ್ಟದಕಲ್ಲಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
ಉತ್ಸವದ ಅಂಗವಾಗಿ ಕುಸ್ತಿ, ಕಬಡ್ಡಿ, ಸಂಗಿರಾಣಿ ಕಲ್ಲು ಎತ್ತುವ ಸ್ಪರ್ಧೆ, ರಾಕ್ ಕ್ಲೈಂಬಿಂಗ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ. ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಖ್ಯಾತ ಸಂಗೀತ ನಿರ್ದೇಶಕರು ಮತ್ತು ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಗಾಯಕ ವಿಜಯ್ ಪ್ರಕಾಶ್ ಹಾಗೂ ಸಂಚಿತ್ ಹೆಗಡೆ ಅವರ ತಂಡಗಳು ಮನರಂಜನೆ ನೀಡಲಿವೆ.
ಸ್ಥಳೀಯ ದೇಶಿ ಹಾಗೂ ಜನಪದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಬಾದಾಮಿ ಐತಿಹಾಸಿಕ ಸ್ಥಳಗಳ ವೀಕ್ಷಣೆಗೆ ಹೆಲಿಕಾಪ್ಟರ್ ಮೂಲಕ ಹೆಲಿಟೂರಿಸಂ ವ್ಯವಸ್ಥೆಯನ್ನೂ ಆಯೋಜಿಸಲಾಗುತ್ತದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…