Featured

10 ಸಾವಿರ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ: ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ – Vishwanews24

10 ಸಾವಿರ ಕ್ರೀಡಾಪಟುಗಳಿಗೆ ಕೋವಿಡ್ ಲಸಿಕೆ: ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ – Vishwanews24

ಬೆಂಗಳೂರು -: ಪ್ರತಿಯೊಬ್ಬ ಕ್ರೀಡಾಪಟುವು ಹೆಸರು ನೋಂದಾಯಿಸಿಕೊಂಡು ಕೋವಿಡ್ ತಡೆ ಲಸಿಕೆಯನ್ನು ಪಡೆದುಕೊಳ್ಳಬೇಕು. ಬೆಂಗಳೂರಿನಲ್ಲಿ ಮಾತ್ರವಲ್ಲದೆ ಜಿಲ್ಲಾ ಕೇಂದ್ರಗಳಲ್ಲೂ ಲಸಿಕೆಯನ್ನು ನೀಡಲಾಗುತ್ತಿದ್ದು, ಎಲ್ಲ ಕ್ರೀಡಾಪಟುಗಳು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದ್ದಾರೆ. ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಖ್ಯಾತ ಬ್ಯಾಡ್ಮಿಂಟನ್ ಕ್ರೀಡಾಪಟು ಅನುಪ್ ಶ್ರೀಧರ್ ಅವರಿಗೆ ಲಸಿಕೆ ಹಾಕಿಸುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದಲ್ಲಿ ಕೊರೋನ ಇಳಿಮುಖವಾಗುತ್ತಿದೆ. ಆದಾಗ್ಯೂ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳುವುದು ಹಾಗೂ ಲಸಿಕೆಯನ್ನು ಪಡೆದುಕೊಳ್ಳುವುದು ಅವಶ್ಯಕ. ದೈಹಿಕ ಕ್ಷಮತೆಯನ್ನು ಸದಾಕಾಲ ಕಾಪಾಡಿಕೊಳ್ಳಬೇಕಾಗಿರುವುದು ಕ್ರೀಡಾಪಟುಗಳ ಆದ್ಯ ಕರ್ತವ್ಯ. ಅವರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ ಕೂಡ ಹೌದು. ಹೀಗಾಗಿ ಕ್ರೀಡಾಪಟುಗಳಿಗೆ ಕೋವಿಡ್ -19 ಲಸಿಕೆ ನೀಡುವ ಸಲುವಾಗಿ ಅಭಿಯಾನ ಆರಂಭಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಲಸಿಕೆ ನೀಡುವ ಕಾರ್ಯ ನಡೆಯಲಿದೆ. ಎರಡೇ ದಿನಕ್ಕೆ ಅಭಿಯಾನವನ್ನು ಮುಗಿಸುವುದಿಲ್ಲ. ರಾಜ್ಯಾದ್ಯಂತ ಇರುವ 10 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡಬೇಕು. ಎಲ್ಲ ಜಿಲ್ಲಾ ಕೇಂದ್ರದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಈ ಅಭಿಯಾನ ನಡೆಯುತ್ತಿದೆ ಎಂದು ಸಚಿವರು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆ ಸಹಯೋಗದಲ್ಲಿ ಈ ಅಭಿಯಾನವನ್ನು ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ 2200 ಕ್ರೀಡಾಪಟುಗಳು ಈಗಾಗಲೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇಂದು ಮತ್ತು ನಾಳೆ ಈಗಾಗಲೇ ಹೆಸರು ನೋಂದಾಯಿಸಿಕೊಂಡಿರುವವರಿಗೆ ಲಸಿಕೆ ನೀಡಲಾಗುತ್ತದೆ. ಈಗ ಹೆಸರು ನೋಂದಾಯಿಸಿಕೊಂಡವರಿಗೆ ಅಭಿಯಾನವನ್ನು ಮುಂದುವರಿಸಿ ಲಸಿಕೆಯನ್ನು ನೀಡಲಾಗುತ್ತದೆ. ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಅಭಿಯಾನ ಆರಂಭವಾಗಿದ್ದು, ಎಲ್ಲ ಕ್ರೀಡಾಪಟುಗಳು ಲಸಿಕೆ ಪಡೆದುಕೊಂಡ ನಂತರ ಅಭಿಯಾನವನ್ನು ಮುಕ್ತಾಯಗೊಳಿಸಲಾಗುವುದು. ಇದು ಮೊದಲ ಹಂತದ ಲಸಿಕಾ ಅಭಿಯಾನವಾಗಿದ್ದು, ನಿಗದಿತ ಸಮಯದ ನಂತರ ಎರಡನೇ ಹಂತದ ಲಸಿಕೆಯನ್ನೂ ಸಹ ಇದೇ ಮಾದರಿಯಲ್ಲಿ ನೀಡಲಾಗುವುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸಚಿವರ ಜೊತೆ ಚರ್ಚಿಸಿ ಕ್ರೀಡಾಪಟುಗಳಿಗೆ ಲಸಿಕಾ ಕರಣ ಅಭಿಯಾನದ ರೂಪುರೇಷೆಯನ್ನು ಸಿದ್ದಪಡಿಸಿದ್ದಾರೆ ಎಂದರು.

ಮೊದಲ ಡೋಸ್ ಲಸಿಕೆ ಪಡೆದ ಖ್ಯಾತ ಕ್ರೀಡಾಪಟುಗಳು

ಬ್ಯಾಡ್ಮಿಟನ್ ಆಟಗಾರ ಅನೂಪ್ ಶ್ರೀಧರ್, ಪಿ.ಎನ್. ಪ್ರಕಾಶ್- ಶೂಟರ್, ನಿಖಿಲ್- ಶೂಟರ್, ನಿಶಿತಾ- ರೋಯಿಂಗ್, ಶ್ರೇಯಾ ಬಿ. – ರೋಯಿಂಗ್, ಭೂಮಿಕಾ ಆರ್. ಕೇಸರಕರ್- ಸ್ಮಿಮ್ಮರ್, ಪ್ರಿಯಾ ಮೋಹನ್- ಅಥ್ಲೀಟ್ , ನ್ಯಾಶನಲ್ ಚಾಂಪಿಯನ್ ಗಳಾದ ಐಶ್ವರ್ಯಾ, ಯಶವಂತ್, ಅಕ್ಷಯ್ ಸೇರಿದಂತೆ ನೂರಾರು ಕ್ರೀಡಾಪಟುಗಳು ಲಸಿಕೆ ಪಡೆದರು.

ಸಂಸದ ಪಿ.ಸಿ. ಮೋಹನ್, ರಾಜ್ಯ ಒಲಿಪಿಕ್ ಸಂಸ್ಥೆ ಅಧ್ಯಕ್ಷ ಗೋವಿಂದರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಇಲಾಖೆ ಆಯುಕ್ತ ಗೋಪಾಲಕೃಷ್ಣ, ಸೇರಿದಂತೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago