Featured

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..! Vishwanews24

100 ರೂ. ಹಳೆಯ ನೋಟುಗಳ ಚಲಾವಣೆ ಮಾರ್ಚ್ ನಿಂದ ಸ್ಥಗಿತ..!

ಮಂಗಳೂರು: ರೂ.100 ಮುಖಬೆಲೆಯ ಸ್ವಚ್ಛವಾದ ಹೊಸ ಸೀರಿಸ್’ನ ನೋಟುಗಳು ಜನತೆಯಲ್ಲಿ ಚಲಾವಣೆಯಲ್ಲಿ ಇರುವಂತೆ ಮಾಡುವ ಉದ್ದೇಶ ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ಹಳೆಯ ಸೀರಿಸ್’ನ ಎಲ್ಲಾ ನೋಟುಗಳನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ.

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕಿಂಗ್ ಭದ್ರತಾ ಸಮಿತಿ ಮತ್ತು ನಗದು ನಿರ್ವಹಣಾ ಸಮಿತಿ ಸಬೆಯಲ್ಲಿ ಆರ್’ಬಿಐ ಸಹಾಯಕ ಮಹಾಪ್ರಬಂಧಕ ಬಿ.ಎಂ.ಮಹೇಶ್ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸದೆ ದುರಂಹಕಾರದಿಂದ ವರ್ತಿಸಿದೆ : ಸೋನಿಯಾ ಗಾಂಧಿ -Vishwanews24

ಹಳೆಯ ನೋಟುಗಳಂತೆ ಕಾಣುವ ಖೋಟಾನೋಟುಗಳು ಹೆಚ್ಚಾಗಿರುವುದರಿಂದ ರೂ.100ರ ಮುಖಬೆಲೆಯ ಹಳೆಯ ಸೀರಿಸ್’ನ ನೋಟುಗಳನ್ನು ಹಿಂಪಡೆಯಲಾಗುತ್ತಿದೆ. ಹಳೆಯ ಸೀರಿಸ್ ಹೊಂದಿರುವ 100ರ ಕರೆನ್ಸಿ ನೋಟುಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಹಿಂಪಡೆಯುವ ನಿರ್ಧಾರಕ್ಕೆ ಬರಲಾಗಿದೆ. ಕಳೆದ 6 ವರ್ಷಗಳಿಂದ ಈ ನೋಟುಗಳು ಮುದ್ರಣವಾಗುತ್ತಿಲ್ಲ. ಆದರೆ, ಈ ಹಿಂದೆಯೇ ಮುದ್ರಣಗೊಂಡಿರುವ ಈ ನೋಟುಗಳನ್ನು ಸಂಪೂರ್ಣವಾಗಿ ಹಿಂಪಡೆಯುವುದು ಆರ್’ಬಿಐ ಉದ್ದೇಶವಾಗಿದೆ. ಚಲಾವಣೆಯಲ್ಲಿರುವ ಹಳೆಯ ನೋಟುಗಳನ್ನು ಹಂತ ಹಂತವಾಗಿ ಹಿಂಪಡೆಯಲಾಗುತ್ತಾ ಬರಲಾಗಿದೆ ಮಾರ್ಚ್ ಅಂತ್ಯಕ್ಕೆ ಇದೂ ಪೂರ್ಣವಾಗಲಿದೆ ಎಂದು ಹೇಳಿದ್ದಾರೆ.

ನೋಟು ವಾಪಸ್ ಕಾರಣಕ್ಕೆ ಜನತೆ ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ. ಸ್ವಚ್ಛ ನೋಟುಗಳು ಜನತೆಯ ಕೈಗೆ ಸಿಗಬೇಕೆಂಬುದು ಮಾತ್ರ ಉದ್ದೇಶ. ಇದು ನೋಟು ಅಮಾನ್ಯೀಕರಣ ಅಲ್ಲ ಎಂದು ಇದೇ ವೇಳೆ ಮಹೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಹೊಸ ಸೀರಿಸ್ ಹೊಂದಿರುವ 100ರ ಮುಖಬೆಲೆಯ ನೋಟುಗಳು ಮಾತ್ರ ಚಲಾವಣೆಯಲ್ಲಿರಬೇಕು. ಬ್ಯಾಂಕ್ ನವರು ಅಂತಹ ನೋಟುಗಳನ್ನು ಇರಿಸಿಕೊಳ್ಳದೆ ಕರೆನ್ಸಿ ಚೆಸ್ಟ್’ಗೆ ಒಪ್ಪಿಸಬೇಕು ಎಂದು ಸೂಚಿಸಿದ್ದಾರೆ.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

3 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago