Featured

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮ ಕಲಶೋತ್ಸವ ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಭವ್ಯ ಸ್ವಾಗತ – vishwanews24

ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮ ಕಲಶೋತ್ಸವ ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಭವ್ಯ ಸ್ವಾಗತ

ಕಾಪು: ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ. 25 ರಿಂದ ಮಾ. 5ರವರೆಗೆ ನಡೆಯಲಿದ್ದು. ಈ ಪ್ರಯುಕ್ತ ಹರಿದ್ವಾರದಿಂದ ತಂದ ಪವಿತ್ರ ಗಂಗಾಜಲವನ್ನು ಮಂಗಳೂರು ವಿಮಾನ ನಿಲ್ದಾಣದಿಂದ ವಾಹನ ಜಾಥಾದಿಂದ ಬರಮಾಡಿ ಕೊಂಡು ಕಾಪುಶ್ರೀ ಮಹಾತೋಬಾರ ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನಕ್ಕೆ ಶುಕ್ರವಾರ ತರಲಾಯಿತು.

ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಪ್ರಮುಖರನ್ನೊಳಗೊಂಡ 9 ಮಂದಿಯ ತಂಡ ಗಂಗಾಜಲದ 9 ಕುಂಭಗಳೊಂದಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು ಅವರನ್ನು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿ ಉಪಸ್ಥಿತಿಯಲ್ಲಿ ಸ್ವಾಗತಿಸಲಾಯಿತು. ಬಳಿಕ 9 ಕುಂಭಗಳನ್ನು ವಿಶೇಷವಾಗಿ ಅಲಂಕರಿಸಿ ವಾಹನದಲ್ಲಿರಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಲಾಯಿತು.

ಬಳಿಕ ದಾರಿಯುದ್ದಕ್ಕೂ ಸುರತ್ಕಲ್, ಮೂಲ್ಕಿ, ಹೆಜಮಾಡಿ, ಪಡುಬಿದ್ರಿ, ಉಚ್ಚಿಲ, ಮೂಳೂರು, ಕಾಪುವಿನವರೆಗೆ ಭಕ್ತಾದಿಗಳು ಪುಷ್ಪಾರ್ಚನೆ ಸಲ್ಲಿಸಿ ಸ್ವಾಗತಿಸಿದರು. ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವಸ್ಥಾನದಲ್ಲಿ ನೂರಾರು ಭಕ್ತರು ಮತ್ತು ಸುಮಂಗಲೆಯರು ಪುಷ್ಪಾರ್ಚನೆಗೈದು ಗಂಗಾಜಲವನ್ನು ಸ್ವಾಗತಿಸಿದರು.

ಬಳಿಕ ಹೊಸಮಾರಿಗುಡಿಯ ಪ್ರಧಾನತಂತ್ರಿ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ.ಕುಮಾರಗುರು ತಂತ್ರಿ ಉಪಸ್ಥಿತಿಯಲ್ಲಿ ಪ್ರಧಾನ ಆರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಹಾಗೂ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ತಂತ್ರಿಗಳಾದ ವೇ.ಮೂ.ಕಲ್ಯ ಶ್ರೀಶ ತಂತ್ರಿ ವಿಶೇಷ ಪೂಜೆ ನೆರವೇರಿಸಿದರು. ಬಾರಕೂರು ಸಂಸ್ಥಾನ ಮಠದ ಸಂತೋಷ್ ಗುರೂಜಿ ಸಾನ್ನಿಧ್ಯ ವಹಿಸಿದ್ದರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಆರ್ಥಿಕ ಸಮಿತಿ ಅಧ್ಯಕ್ಷ ಉದಯ ಸುಂದರ ಶೆಟ್ಟಿ, ಗಂಗಾಜಲ ಸ್ವಾಗತ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಶ್ರೀಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊತ್ತೇಸರ ಮನೋಹರ್ ಎಸ್.ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕೋಶಾಧಿಕಾರಿ ರವಿಕಿರಣ್, ಬಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ದಾನಿ ಪ್ರಭಾಕರ್ ಶೆಟ್ಟಿ ಮಂಡಗದ್ದೆ ಮಹಿಳಾ ಸಮಿತಿ ಅಧ್ಯಕ್ಷೆ ಬೀನಾ ವಾಸುದೇವ ಶೆಟ್ಟಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖ‌ರ್ ಸಾಲ್ಯಾನ್, ಮನೋಹರ್ ರಾವ್, ಜಯಲಕ್ಷ್ಮೀ ಸುರೇಶ್ ಶೆಟ್ಟಿ, ಚರಿತಾ ದೇವಾಡಿಗ, ಶ್ರೀಧರ ಕಾಂಚನ್, ರವೀಂದ್ರ ಮಲ್ಲಾರ್, ಪ್ರಮುಖರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲು, ಸುಹಾಸ್ ಹೆಗ್ಡೆ ನಂದಳಿಕೆ, ಹರಿಯಪ್ಪ ಕೋಟ್ಯಾನ್, ಕೆ.ವಿಶ್ವನಾಥ್, ಶ್ರೀಕರ ಶೆಟ್ಟಿ ಕಲ್ಯ, ಗೀತಾಂಜಲಿ ಸುವರ್ಣ, ಸಾವಿತ್ರಿ ಗಣೇಶ್, ಶಿಲ್ಪಾ ಸುವರ್ಣ, ಜಯರಾಮ ಆಚಾರ್ಯ ಉಪಸ್ಥಿತರಿದ್ದರು.

ನವ ದಿನ ವಿಶೇಷ ಪೂಜೆ

ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಾನದಲ್ಲಿ ಮುಂದಿನ 9 ದಿನ ವಿಶೇಷ ಪೂಜೆ ಸಲ್ಲಿಸಿದ ನಂತರ ಕಾಪು ಶ್ರೀ ಹೊಸ ಮಾರಿಗುಡಿ ಅಮ್ಮನ ಸನ್ನಿಧಾನಕ್ಕೆ ಗಂಗಾಜಲವನ್ನು ತಂದು ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನೆರವೇರಿಸಲಾಗುವುದು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

15 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

16 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

16 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

19 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

19 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

19 hours ago