ದಕ್ಷಿಣ ಕನ್ನಡ

ಬೆಳ್ತಂಗಡಿ: ಮನೆಗೆ ನುಗ್ಗಿ 9.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು – vishwanews24

ಬೆಳ್ತಂಗಡಿ: ಮನೆಗೆ ನುಗ್ಗಿ 9.50 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೆಳ್ತಂಗಡಿ : ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಬಾಗಿಲಿನ ಚಿಲಕ ಮುರಿದು ಒಳಪ್ರವೇಶಿಸಿದ ಕಳ್ಳರು ಸುಮಾರು 9.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ತಾಲೂಕಿನ ಕುತ್ಲೂರು ಗ್ರಾಮದ ಮಂಜುಶ್ರೀ ನಗರದಲ್ಲಿ ನಡೆದಿದ್ದು, ಅ. 6ರಂದು ಬೆಳಕಿಗೆ ಬಂದಿದೆ.

ಮಂಜುಶ್ರೀ ನಗರದ ಅವಿನಾಶ್ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಅ. 2ರ ಮಧ್ಯಾಹ್ನದಿಂದ ಅ. 6ರ ಸಂಜೆಯ ನಡುವೆ ಕಳ್ಳರು ಈ ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮನೆಯ ಎದುರಿನ ಬಾಗಿಲಿನ ಚಿಲಕದ ಕೊಂಡಿಯನ್ನು ಮುರಿದು ಒಳ ಪ್ರವೇಶಿಸಿದ್ದಾರೆ. ಮನೆಯ ಬೆಡ್ ರೂಮಿನ ಕಪಾಟಿನ ಚಿಲಕವನ್ನು ಮುರಿದು ಅದರೊಳಗಿದ್ದ ವ್ಯಾನಿಟಿ ಬ್ಯಾಗ್ ನಲ್ಲಿ ಟಿಫಿನ್ ಬಾಕ್ಸ್ ನಲ್ಲಿ ಇಟ್ಟಿದ್ದ ಹಾಗೂ ಬ್ಯಾಗ್ ನ ಪರ್ಸ್ ನಲ್ಲಿ ಇಟ್ಟಿದ್ದ ಎರಡೆಳೆಯ ಚಿನ್ನದ ಕರಿಮಣಿ ಸರ 1, ಎರಡೆಳೆಯ ಮುತ್ತಿನ ಸರ ಜತೆಗೆ ಲಕ್ಷ್ಮೀ ಪೆಂಡೆಂಟ್ ಇರುವ ಚಿನ್ನದ ಸರ 1, ಚಿನ್ನದ ಬ್ರಾಸ್ ಲೈಟ್ 2, ಮಕ್ಕಳ ಚಿನ್ನದ ಸರ 2, ಚಿನ್ನದ ಉಂಗುರ 1, ಬೆಂಡೋಲೆ 1 ಜೊತೆ, ಕಿವಿಯ ಚಿಕ್ಕ ಓಲೆಗಳು 5 ಜೊತೆ, ಚಿನ್ನದ ಉಂಗುರಗಳು 3 ನ್ನು ಕಳ್ಳರು ಕದ್ದೊಯ್ದಿದ್ದಾರೆ. ಕಳವಾದ ಒಟ್ಟು ಚಿನ್ನದ ತೂಕ ಸುಮಾರು 149 ಗ್ರಾಂ ಆಗಿದ್ದು, ಅಂದಾಜು ಮೌಲ್ಯ ರೂ 9,50,000 ಆಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

3 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

3 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

3 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

3 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

3 days ago