Featured

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ : ಸಂಪುಟ ನಿರ್ಧಾರ – vishwanews24

ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ : ಸಂಪುಟ ನಿರ್ಧಾರ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡುದಾರರಿಗೆ ಹೆಚ್ಚುವರಿಯಾಗಿ ನೀಡುತ್ತಿರುವ ಐದು ಕೆ.ಜಿ ಅಕ್ಕಿಯ ಬದಲಾಗಿ 61.19 ಕೋಟಿ ರೂ. ವೆಚ್ಚದಲ್ಲಿ ʼಇಂದಿರಾ ಆಹಾರ ಕಿಟ್ʼ(ಪೌಷ್ಠಿಕ ಆಹಾರ ಕಿಟ್) ನೀಡಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ 6119.52 ಕೋಟಿ ರೂ. ವೆಚ್ಚದಲ್ಲಿ ಇಂದಿರಾ ಆಹಾರ ಕಿಟ್ ಒದಗಿಸಲು ಬಜೆಟ್ ಮರುಹಂಚಿಕೆ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.

ಇಂದಿರಾ ಆಹಾರ ಕಿಟ್‍ನಲ್ಲಿ 2 ಕೆ.ಜಿ ತೊಗರಿ ಬೇಳೆ, 1 ಲೀಟರ್ ಅಡುಗೆ ಎಣ್ಣೆ, 1 ಕೆ.ಜಿ ಸಕ್ಕರೆ ಹಾಗೂ 1 ಕೆ.ಜಿ ಉಪ್ಪು ಇರಲಿದೆ. ಅನ್ನಭಾಗ್ಯ ಅಕ್ಕಿಯ ಅಕ್ರಮ ಸಾಗಾಟ, ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಎಚ್.ಕೆ.ಪಾಟೀಲ್ ತಿಳಿಸಿದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

4 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

5 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

6 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

6 hours ago