ಮಂಗಳೂರು : ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹಿಂದೂ ಸಂಘಟನೆ ಮುಖಂಡ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರು ನ್ಯಾಯಾಲಯಕ್ಕೆ ಸರೆಂಡರ್ ಆಗಿದ್ದಾರೆ. 3-4 ತಿಂಗಳು ವಿಚಾರಣೆಗೆ ಹಾಜರಾಗದೆ ಭರತ್ ಕುಮ್ಡೇಲು ತಪ್ಪಿಸಿಕೊಂಡಿದ್ದರು.
ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಎರಡು ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಕೇಸ್ನಲ್ಲಿ ಭರತ್ ಕುಮ್ಡೇಲು ತಲೆಮರೆಸಿಕೊಂಡಿದ್ದರು.
ಕಳೆದ 3-4 ತಿಂಗಳು ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೋರ್ಟ್ಗೆ ಹಾಜರಾಗದ ಕಾರಣ ವಾರಂಟ್ ಜಾರಿಯಾಗಿತ್ತು. ಜೊತೆಗೆ ಕೆಲ ದಿನಗಳ ಹಿಂದಷ್ಟೇ ಭರತ್ ಕುಮ್ಡೇಲು ಸೇರಿದಂತೆ ಕೆಲ ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕೇಸ್ ದಾಖಲಿಸಲಾಗಿತ್ತು. ವಾರಂಟ್ ಮತ್ತು ಕೋಕಾ ಕೇಸ್ ಹಿನ್ನೆಲೆ ಸದ್ಯ ಭರತ್ ಜಿಲ್ಲಾ ಕೋರ್ಟ್ಗೆ ಶರಣಾಗಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…