Featured

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ – vishwanews24

ಉಡುಪಿ: ಶೀರೂರು ಪರ್ಯಾಯಕ್ಕೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ : ಡಾ. ವೀರೇಂದ್ರ ಹೆಗ್ಗಡೆ

ಉಡುಪಿ: ಉಡುಪಿ ಪರ್ಯಾಯ ಅಂದರೆ ಮಠದ ಪರ್ಯಾಯ ಅಲ್ಲ, ಅದು ನಮ್ಮೆಲ್ಲರ ಪರ್ಯಾಯ. ಭಾವೀ ಶೀರೂರು ಪರ್ಯಾಯ ಮಠಾಧೀಶರು ಅತ್ಯಂತ ಕಿರಿಯರು ಆಗಿರುವುದರಿಂದ ಅವರಿಗೆ ಎಲ್ಲರೂ ಸಹಕಾರ ಕೊಡುವುದು ಕರ್ತವ್ಯ ಹಾಗೂ ಜವಾಬ್ದಾರಿ ಆಗಿದೆ. ಆದುದರಿಂದ ಎಲ್ಲರೂ ಸಹಕಾರ ನೀಡಬೇಕೆಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಶೀರೂರು ಮಠದ ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಶುಕ್ರವಾರ ನಡೆದ ಶೀರೂರು ಪರ್ಯಾಯ 2026-2028 ಇದರ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

“ಭಗವಂತ ಕೊಟ್ಟ ದೇಹವನ್ನು ಹೊರೆ ಮಾಡದೆ, ಸೇವೆಯ ಮೂಲಕ ಅದನ್ನು ದೇವರಿಗೆ ಅರ್ಪಿಸಬೇಕು. ಭಕ್ತಿಯಿಂದ ಸೇವೆ ಸಲ್ಲಿಸುವುದು ಜೀವನದ ಪರಮಾರ್ಥ. ಈ ದೃಷ್ಟಿಯಿಂದ ಉಡುಪಿಯ ಪರ್ಯಾಯೋತ್ಸವ ಭಗವಂತನಿಗೆ ಸಮರ್ಪಣೆ ಮಾಡಲು ಅಪೂರ್ವ ಅವಕಾಶ,” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

ಮಠದ ದಿವಾನ ಡಾ.ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿಯ ಅಧ್ಯಕ್ಷ, ಶಾಸಕ ಯಶ್‌ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎಂ.ಬಿ.ಪುರಾಣಿಕ್, ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.

ಶಾಸಕರಾದ ಸುನೀಲ್ ಕುಮಾರ್, ಗುರುರಾಜ್ ಗಂಟಿಹೊಳೆ, ಕಿರಣ್ ಕೊಡ್ಗಿ, ಮಾಜಿ ಶಾಸಕ ರಘುಪತಿ ಭಟ್, ಕಟೀಲು ಕ್ಷೇತ್ರ ಮೊಕ್ತೇಸರ ಲಕ್ಷ್ಮೀನಾರಾಯಣ ಅಸ್ರಣ್ಣ, ಹರಿಕೃಷ್ಣ ಪುನರೂರು, ದಿನಕರ ಹೇರೂರು, ಪ್ರದೀಪ್ ಕುಮಾರ್ ಕಲ್ಕೂರ, ಆನಂದ ಸುವರ್ಣ, ಹರಿಯಪ್ಪ ಕೊಟ್ಯಾನ್, ಧನಂಜಯ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್, ಗಣೇಶ್ ರಾವ್, ರಮೇಶ್ ವೈದ್ಯ, ಪುರುಷೋತ್ತಮ ಶೆಟ್ಟಿ, ನಾರಾಯಣ ಕರ್ಕೇರ, ಬಿ.ಎನ್.ಶಂಕರ ಪೂಜಾರಿ, ಮಹೇಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಸಮಿತಿಯ ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಾರಕೂರು ದಾಮೋದರ್ ಶರ್ಮ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

18 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

18 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

18 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

19 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

19 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

19 hours ago