Featured

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ : ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24

11 ಜನ ಮಕ್ಕಳಿದ್ದರೂ ಯಾರಿಗೂ  ಬೇಡವಾದ ತಾಯಿ,ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ

ಹಾವೇರಿ: 11 ಜನ ಮಕ್ಕಳು, ಮೊಮ್ಮಕ್ಕಳಿದ್ದರೂ ಅವರ್ಯಾರು ವೃದ್ಧೆಯೊಬ್ಬರನ್ನು ನೋಡಿಕೊಳ್ಳಲು ತಯಾರಿಲ್ಲದ ಕಾರಣ ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದಲ್ಲಿ ನಡೆದಿದೆ.

ವೃದ್ಧೆಯ ಹೆಸರು ಪುಟ್ಟವ್ವ ಕೊಟ್ಟೂರ. 75ನ ವರ್ಷ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ರಂಗನಾಥ ನಗರದ ನಿವಾಸಿ. ಪುಟ್ಟವ್ವಳಿಗೆ 7 ಜನ ಗಂಡು ಹಾಗೂ 4 ಜನ ಹೆಣ್ಣು ಮಕ್ಕಳಿದ್ದಾರೆ. ಎಲ್ಲಾ ಮಕ್ಕಳಿಗೂ ಮದುವೆಯಾಗಿದ್ದು, ಅವರೆಲ್ಲರಿಗೂ 1-2 ಎಂಬಂತೆ ಮಕ್ಕಳಿದ್ದಾರೆ. ಪುಟ್ಟವ್ವಳ ಪತಿ ರಾಣೆಬೆನ್ನೂರು ನಗರದಲ್ಲಿ 7 ಮನೆಗಳು, ಸೈಟು ಮತ್ತು ಜಮೀನಿ ಮಾಡಿದ್ದಾರೆ. ತಾಲೂಕಿನ ಹುಲ್ಲತ್ತಿ ಗ್ರಾಮದ ಹದ್ದಿನಲ್ಲಿರೋ 28 ಎಕರೆ ಜಮೀನು ವ್ಯಾಜ್ಯದಲ್ಲಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆಯಂತೆ.

ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪುಟ್ಟವ್ವಳ ಪತಿ ಹನುಮಂತಪ್ಪ ಕೆಲವು ವರ್ಷಗಳ ಹಿಂದೆಯೇ ನಿಧನರಾಗಿದ್ದಾರೆ. ಆದರೆ ಈಗಲೂ ಮನೆಗಳು, ಜಮೀನು ಸೇರಿದಂತೆ ಎಲ್ಲವೂ ಪುಟ್ಟವ್ವಳ ಪತಿ ಹನುಮಂತಪ್ಪನ ಹೆಸರಿನಲ್ಲೇ ಇವೆ. ಇಷ್ಟೆಲ್ಲಾ ಇದ್ದರೂ ಇಳಿ ವಯಸ್ಸಿನಲ್ಲಿರೋ ಹೆತ್ತ ತಾಯಿಯನ್ನು ಯಾರೂ ನೋಡಿಕೊಳ್ಳುತ್ತಿಲ್ಲ. ಪುಟ್ಟವ್ವಳಿಗೆ ಹಲವು ವಯೋಸಹಜ ಕಾಯಿಲೆಗಳೂ ಇವೆ. ಗಂಡು, ಹೆಣ್ಣು ಮಕ್ಕಳು, ಮೊಮ್ಮಕ್ಕಳು ಇದ್ದರೂ ಯಾರೂ ಪುಟ್ಟವ್ವಳಿಗೆ ಒಂದು ಹೊತ್ತಿನ ಊಟ ಹಾಕುತ್ತಿಲ್ಲ. ಆರೋಗ್ಯ ಸಮಸ್ಯೆಯಾದಾಗ ಆಸ್ಪತ್ರೆಗೂ ಕರೆದುಕೊಂಡು ಹೋಗುತ್ತಿಲ್ಲ. ಹೀಗಾಗಿ ನನಗೆ ಈ ಜೀವನ ಸಾಕಾಗಿದೆ. ದಯಾಮರಣ ಕೊಡಿ ಅಂತ ವೃದ್ಧೆ ಪುಟ್ಟವ್ವ ದಯಾಮರಣದ ಪತ್ರ ಹಿಡಿದುಕೊಂಡು ಜಿಲ್ಲಾಡಳಿತ ಭವನಕ್ಕೆ ಅಲೆಯುತ್ತಿದ್ದಾರೆ.

ಹೆಣ್ಣು ಮಕ್ಕಳು ಮದುವೆಯಾಗಿ ಗಂಡನ ಮನೆ ಸೇರಿದ್ದಾರೆ. 7 ಜನ ಗಂಡು ಮಕ್ಕಳ ಪೈಕಿ ಕಿರಿಯ ಮಗ ಗೋವಿಂದರಾಜ ಮಾತ್ರ ಪುಟ್ಟವ್ವಳಿಗೆ ಕೆಲವು ವರ್ಷಗಳ ಕಾಲ ನೋಡಿಕೊಂಡಿದ್ದರು. ಆದರೆ ಅವರ ಆರ್ಥಿಕ ಪರಿಸ್ಥಿತಿ ಪ್ರಸ್ತುತ ಸರಿ ಇಲ್ಲ. ಪತಿಯ ಹೆಸರಿನಲ್ಲಿರೋ ಆಸ್ತಿಗಳಲ್ಲಿ ಅಲ್ಪಸ್ವಲ್ಪ ಮಾರಾಟ ಮಾಡಿ ಜೀವನ ಸಾಗಿಸಬೇಕು ಎಂದರೆ ಗಂಡು ಮಕ್ಕಳು ಅದಕ್ಕೂ ಬಿಡುತ್ತಿಲ್ಲ. ಎರಡು ಹೊತ್ತಿನ ಊಟವನ್ನೂ ಹಾಕುತ್ತಿಲ್ಲ. ಹೀಗಾಗಿ 11 ಜನ ಮಕ್ಕಳಿದ್ರೂ ಅಕ್ಕಪಕ್ಕದ ಮನೆಯವರು, ಅವರಿವರು ಕೊಟ್ಟ ಊಟ ಮಾಡಿ ಬದುಕಬೇಕಾಗಿದೆ ಎಂದು ಪುಟ್ಟವ್ವ ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

ಇದನ್ನೂ ಓದಿ : NIA ದಾಳಿ ವಿರೋಧಿಸಿ ಸುರತ್ಕಲ್‌ ಬಳಿ ಹೆದ್ದಾರಿ ತಡೆ..ಶಾಸಕ ಭರತ್ ತೀವ್ರ ಆಕ್ರೋಶ ; ಸೂಕ್ತ ಕ್ರಮಕ್ಕೆ ಆಗ್ರಹ – Vishwanews24

ಮಕ್ಕಳು ನೋಡಿಕೊಳ್ಳದೇ ಇರೋದನ್ನು ಕಂಡು ಜೀವನವೇ ಸಾಕು ಸಾಕು ಅನ್ನಿಸಿದೆ. ನನಗೆ ದಯಾಮರಣ ಕೊಡಿಸಿ ಅಂತ ವೃದ್ಧ ತಾಯಿ ಪುಟ್ಟವ್ವ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಬಳಿ ತನ್ನ ಅಳಲು ತೋಡಿಕೊಂಡಿದ್ದಾರೆ. ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಬರೆದಿರೋ ಪತ್ರ ಹಿಡಿದು ಬಂದಿರೋ ವೃದ್ಧೆಯನ್ನು ಭೇಟಿಯಾಗಿ ಹಿರಿಯ ನಾಗಕರಿಕರ ಕಲ್ಯಾಣ ಇಲಾಖೆ ಅಧಿಕಾರಿ ಆಶು ನದಾಫ ಸಮಸ್ಯೆ ಆಲಿಸಿದ್ದಾರೆ. ಪುಟ್ಟವ್ವಳಿಗೆ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸಲಹೆ ನೀಡಿದ್ದಾರೆ. ಉಳಿದಂತೆ ಪುಟ್ಟವ್ವ ಅವರಿಗೆ ಯಾವುದೇ ಸಮಸ್ಯೆ ಆಗದಂತೆ ಉಳಿದುಕೊಳ್ಳಲು ವೃದ್ಧಾಶ್ರಮದಲ್ಲಿ ವ್ಯವಸ್ಥೆ ಕಲ್ಪಿಸೋದಾಗಿ ಹೇಳಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago