Featured

11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ – Vishwanews24

11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟ – Vishwanews24

ಬೆಂಗಳೂರು, : `ದಕ್ಷಿಣ ಕನ್ನಡ, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕೋವಿಡ್-19 ಸೋಂಕಿನ ಪಾಸಿಟಿವಿಟಿ ಪ್ರಮಾಣ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್‍ಡೌನ್ ನಿರ್ಬಂಧ ಮುಂದುವರಿಸಿದ್ದು, ಉಳಿದ ಜಿಲ್ಲೆಗಳಲ್ಲಿ ಜೂ.14ರಿಂದ 21ರ ವರೆಗೆ ಕೋವಿಡ್ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ವಯವಾಗುವ ನಿಯಮಗಳು

► ದಿನಸಿ, ಮೀನು, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶವಿದೆ.

► ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

► ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.

► ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ.

► ಬಾರ್, ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ. ಮದ್ಯ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರಯಬಹುದು.

► ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ಮಾತ್ರ ಸಂಚರಿಸಬಹುದು

► ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರ, ಮೆಟ್ರೋ ರೈಲು ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿದೆ.

► ನಿಗದಿಯಾದ ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ

► ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

ರಾತ್ರಿ ಕರ್ಫ್ಯೂ: ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಯಾರಿಗೂ ಸಂಚಾರಕ್ಕೆ ಅವಕಾಶವಿಲ್ಲ. ಈ ಅವಧಿಯಲ್ಲಿ ಕಾರ್ಖಾನೆಗಳು ಕೆಲಸ ನಿರ್ವಹಿಸಬಹುದು. ಕೆಲಸಗಾರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.

ವೀಕೆಂಡ್ ಕರ್ಫ್ಯೂ: ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರಸ್ಥರರು, ಮದ್ಯದಂಗಡಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago