ಬೆಂಗಳೂರು, : `ದಕ್ಷಿಣ ಕನ್ನಡ, ಮೈಸೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕೋವಿಡ್-19 ಸೋಂಕಿನ ಪಾಸಿಟಿವಿಟಿ ಪ್ರಮಾಣ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಲಾಕ್‍ಡೌನ್ ನಿರ್ಬಂಧ ಮುಂದುವರಿಸಿದ್ದು, ಉಳಿದ ಜಿಲ್ಲೆಗಳಲ್ಲಿ ಜೂ.14ರಿಂದ 21ರ ವರೆಗೆ ಕೋವಿಡ್ ನೈಟ್ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.
11 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಅನ್ವಯವಾಗುವ ನಿಯಮಗಳು
► ದಿನಸಿ, ಮೀನು, ಮಾಂಸ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶವಿದೆ.
► ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.
► ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ ಮಾಡಕೊಡಲಾಗಿದೆ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ.
► ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ ನೀಡಲಾಗಿದೆ.
► ಬಾರ್, ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ. ಮದ್ಯ ಮಳಿಗೆಗಳು ಮಧ್ಯಾಹ್ನ 2 ಗಂಟೆಯವರೆಗೆ ತೆರಯಬಹುದು.
► ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ಮಾತ್ರ ಸಂಚರಿಸಬಹುದು
► ಕೆಎಸ್ಆರ್ಟಿಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರ, ಮೆಟ್ರೋ ರೈಲು ಸಂಚಾರಕ್ಕೆ ನಿರ್ಬಂಧ ಮುಂದುವರಿಸಲಾಗಿದೆ.
► ನಿಗದಿಯಾದ ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ
► ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ರಾತ್ರಿ ಕರ್ಫ್ಯೂ: ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಯಾರಿಗೂ ಸಂಚಾರಕ್ಕೆ ಅವಕಾಶವಿಲ್ಲ. ಈ ಅವಧಿಯಲ್ಲಿ ಕಾರ್ಖಾನೆಗಳು ಕೆಲಸ ನಿರ್ವಹಿಸಬಹುದು. ಕೆಲಸಗಾರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.
ವೀಕೆಂಡ್ ಕರ್ಫ್ಯೂ: ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರಸ್ಥರರು, ಮದ್ಯದಂಗಡಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…