Featured

11 ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದೆಡೆ ಲಾಕ್‌ಡೌನ್ ಸಡಿಲ : ಸಿಎಂ ಯಡಿಯೂರಪ್ಪ – Vishwanews24

­ 11 ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದೆಡೆ ಲಾಕ್‌ಡೌನ್ ಸಡಿಲಗೊಳಿಸಿ : ಸಿಎಂ ಯಡಿಯೂರಪ್ಪ – Vishwanews24

ಬೆಂಗಳೂರು: ಪಾಸಿಟಿವಿಟಿ ರೇಟ್ ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮುಂದುವರಿಯಲಿದ್ದು, ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಉಸ್ತುವಾರಿ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಗ್ರಾಮಾಂತರ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಗಿರುವ ಲಾಕ್ ಡೌನ್ ಮುಂದುವರಿಯಲಿದೆ ಎಂದು ಹೇಳಿದರು.

ಎಲ್ಲ ಕಾರ್ಖಾನೆಗಳಲ್ಲಿ ಶೇ. 50, ಗಾರ್ಮೆಂಟ್‌ನಲ್ಲಿ ಶೇ.30ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಅಗತ್ಯ ವಸ್ತು ಖರೀದಿಗೆ ಮಧ್ಯಾಹ್ನ 2ರವರೆಗೆ ಅವಕಾಶ ನೀಡಲಾಗಿದೆ. ನಿರ್ಮಾಣ ಚಟುವಟಿಕೆ ಮತ್ತು ಅದಕ್ಕೆ ಸಂಬಂಧಿಸಿದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಪಾರ್ಕ್‌ಗಳಲ್ಲಿ 10 ಗಂಟೆವರೆಗೆ ವಾಕಿಂಗ್ ನಡೆಸಲು ಅನುಮತಿ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಮಧ್ಯಾಹ್ನ 2ರವರೆಗೆ ವ್ಯಾಪಾರ ನಡೆಸಲು ಅನುಮತಿ ನೀಡಲಾಗಿದೆ.

ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಸಂಚರಿಸಲು ಅವಕಾಶ ಕೊಡಲಾಗಿದೆ.

ಇದೇ 14ರ ಸೋಮವಾರ ಬೆಳಿಗ್ಗೆಯಿಂದಲೇ 21ರ ಬೆಳಿಗ್ಗೆಯವರೆಗೆ ಹೊಸ ನಿಯಮ ಅನ್ವಯವಾಗಲಿದೆ.

ಪ್ರತಿದಿನ ಸಂಜೆ 7ಗಂಟೆಯಿಂದ ಬೆಳಗ್ಗೆ 5ಗಂಟೆವರೆಗೆ ನೈಟ್ ಕರ್ಫ್ಯೂ ಮತ್ತು ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಜೂನ್ 14ರಿಂದ ಈ ನಿಯಮ ಜಾರಿಗೆ ಬರಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago