ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಅವರು ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ಬಿಚ್ಚಿಟ್ಟಿದ್ದಾರೆ.
ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಂಪತ್ಯ ಬದುಕಿನ ಬಿರುಕಿನ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ.
ಪ್ರಕಾಶ್ ಕುಮಾರ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ. ಪ್ರಕಾಶ್ ಅವರು ಬಾಲ್ಯದ ಗೆಳೆತಿ ಸೈಂಧವಿ ಅವರನ್ನು 2013ರಲ್ಲಿ ಮದುವೆ ಆದರು. 2020ರಲ್ಲಿ ಈ ದಂಪತಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದರು. ಈಗ ದಾಂಪತ್ಯ ಬದುಕಿಗೆ ಈ ಜೋಡಿ ಕೊನೆ ಹಾಡಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…