Featured

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ – Vishwanews24

11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್

ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಜಿ.ವಿ ಪ್ರಕಾಶ್ ಕುಮಾರ್ ಅವರು ತಮ್ಮ 11 ವರ್ಷಗಳ ದಾಂಪತ್ಯ ಬದುಕಿಗೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಮ್ಯೂಸಿಕ್ ಡೈರೆಕ್ಟರ್ ಜಿ.ವಿ ಪ್ರಕಾಶ್ ಅಧಿಕೃತ ಮಾಹಿತಿ ಬಿಚ್ಚಿಟ್ಟಿದ್ದಾರೆ.‌

ಸಾಕಷ್ಟು ಆಲೋಚಿಸಿ ನಾನು ಹಾಗೂ ಸೈಂಧವಿ  ಬೇರೆ ಆಗುತ್ತಿದ್ದೇವೆ. 11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ. ನಮ್ಮ ಮಾನಸಿಕ ಆರೋಗ್ಯಕ್ಕಾಗಿ ಈ ನಿರ್ಧಾರ ಎಂದು ಪ್ರಕಾಶ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಂಪತ್ಯ ಬದುಕಿನ ಬಿರುಕಿನ ಬಗ್ಗೆ ಹಲವು ದಿನಗಳಿಂದ ಸುದ್ದಿಯಾಗಿತ್ತು. ಈಗ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಈ ವೈಯಕ್ತಿಕ ಪರಿವರ್ತನೆಯ ಸಮಯದಲ್ಲಿ ನಮ್ಮ ಖಾಸಗಿತನಕ್ಕೆ ಬೆಲೆ ನೀಡಬೇಕು ಎಂದು ಮಾಧ್ಯಮಗಳು, ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾವು ದಯೆಯಿಂದ ಕೇಳುತ್ತೇವೆ. ನಾವು ಬೇರೆ ಬೇರೆ ಆಗಿ ಬೆಳೆಯುತ್ತಿದ್ದೇವೆ. ಇದು ಅತ್ಯುತ್ತಮ ನಿರ್ಧಾರ ಎಂದು ನಾವು ಭಾವಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಿಮ್ಮ ತಿಳುವಳಿಕೆ ಮತ್ತು ಬೆಂಬಲವು ಮುಖ್ಯ ಎಂದು ಪ್ರಕಾಶ್ ಬರೆದುಕೊಂಡಿದ್ದಾರೆ.

ಪ್ರಕಾಶ್ ಕುಮಾರ್ ಅವರು ಎ.ಆರ್ ರೆಹಮಾನ್ ಅವರ ಸೋದರಳಿಯ. ಪ್ರಕಾಶ್ ಅವರು ಬಾಲ್ಯದ ಗೆಳೆತಿ ಸೈಂಧವಿ ಅವರನ್ನು 2013ರಲ್ಲಿ ಮದುವೆ ಆದರು. 2020ರಲ್ಲಿ ಈ ದಂಪತಿ ಹೆಣ್ಣು ಮಗುವನ್ನು ಕುಟುಂಬಕ್ಕೆ ಸ್ವಾಗತಿಸಿದರು. ಈಗ ದಾಂಪತ್ಯ ಬದುಕಿಗೆ ಈ ಜೋಡಿ ಕೊನೆ ಹಾಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

13 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

15 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

15 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

15 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

16 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

16 hours ago