ಹಾಸನ : ಚಿತ್ರದುರ್ಗದ ಹಿರಿಯೂರು ಬಳಿ ಲಾರಿ ಹಾಗೂ ಖಾಸಗಿ ಬಸ್ ನಡುವೆ ಭೀಕರವಾದ ಅಪಘಾತ ಸಂಭವಿಸಿ 9 ಜನ ಸಜೀವ ದಹನಗೊಂಡಿದ್ದಾರೆ. ಇನ್ನು ಈ ಒಂದು ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಬೆಂಗಳೂರಿನಿಂದ ಬುಧವಾರ ರಾತ್ರಿ ಸ್ನೇಹಿತೆ ಮಿಲನ ಜೊತೆ ಬಸ್ ಹತ್ತಿ ಹೊರಟಿದ್ದರು. ಮಿಲನ ಗಾಯಗೊಂಡಿದ್ದು, ಚಿಕಿತ್ಸೆ ಪಡಿಯುತ್ತಿದ್ದಾರೆ. ಉಳಿದ ಇಬ್ಬರು ಕಣ್ಮರೆಯಾಗಿದ್ದಾರೆ. ಚಿತ್ರದುರ್ಗದ ಹಿರಿಯೂರಿನತ್ತ ಯುವತಿಯರ ಪೋಷಕರು ಹೊರಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…