Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳಿಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್

ಬೆಂಗಳೂರು : ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೈಕ್ ಟ್ಯಾಕ್ಸಿಗಳಿಗೆ ಲೈಸೆನ್ಸ್ ನೀಡುವುದನ್ನು ಸರ್ಕಾರ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಬೈಕ್ ಟ್ಯಾಕ್ಸಿ ಅಗ್ರಿಗೇಟರ್‌ಗಳು ಅನುಮತಿ ಕೋರಿ ಅರ್ಜಿ ಸಲ್ಲಿಸಿದರೆ, ಆ ಅರ್ಜಿಗಳನ್ನು ಪರಿಗಣಿಸಿ ಪರವಾನಗಿ ನೀಡಬೇಕು ಎಂದು ಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೈಕ್ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಮಂಗಳೂರು: ಜ. 24 ರಂದು ಪಂಪ್‌ವೆಲ್‌ ಮಹಾವೀರ ವೃತ್ತದಲ್ಲಿರುವ ‘ಕಲಶʼ ಉದ್ಘಾಟನೆ – vishwanews24

ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಬೈಕ್ ಟ್ಯಾಕ್ಸಿ ಸೇವೆಗಳು ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಒಂದು ಭಾಗವಾಗಿದ್ದು, ಕಾನೂನು ಚೌಕಟ್ಟಿನೊಳಗೆ ಅವುಗಳನ್ನು ನಿರ್ಬಂಧಿಸುವಂತಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

Leave a Reply