ಉಡುಪಿ: ಕೊಡಿಬೆಂಗ್ರೆ ಸಮೀಪ ಸಮುದ್ರದಲ್ಲಿ ಸಂಭವಿಸಿದ ದೋಣಿ ದುರಂತ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೋಟ್ ಮಾಲೀಕರಾದ ಬ್ರಹ್ಮಾವರ ತಾಲೂಕಿನ ಕೋಡಿ ಗ್ರಾಮದ ನಿವಾಸಿಗಳಾದ ಸುಹಾಸ್ ಶ್ರೀಯಾನ್(23) ಮತ್ತು ಸುಫಿಯಾನ್(20) ಹಾಗೂ ಬೋಟ್ ಚಾಲಕ ಕೋಡಿ ಗ್ರಾಮದ ನಿವಾಸಿ ವಾಸು ಮೆಂಡನ್(52̧) ಬಂಧಿತ ಆರೋಪಿಗಳು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜ. 26ರಂದು ಬೆಳಿಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಸಾಸೋದ್ಯಮ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದಿರುವುದು ಕಂಡುಬಂದಿದೆ. ಅಲ್ಲದೆ, ಬೋಟ್ ಪ್ರವಾಸಿಗರ ವಿಹಾರಕ್ಕೆ ಯೋಗ್ಯವಾಗಿದೆ ಎಂಬ ಧೃಢೀಕರಣ ಪತ್ರವನ್ನು ಹೊಂದಿರಲಿಲ್ಲ. ಪ್ರವಾಸಿಗರನ್ನು ಕರೆದುಕೊಂಡು ಹೋಗುವಾಗ ಸಂದರ್ಭದಲ್ಲಿಯೂ ಲೈಫ್ ಜಾಕೆಟ್ ನಂತಹ ಯಾವುದೇ ಮುಂಜಾಗೃತಾ ಕ್ರಮಗಳನ್ನು ಅನುಸರಿಸದೆ ಇರುವುದು ಕೂಡ ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳ ವಿರುದ್ಧ ಅಜಾಗರೂಕತೆ ಹಾಗೂ ನಿರ್ಲಕ್ಷತನದ ಸೆಕ್ಷನ್ ನಡಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…