ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಸೋಮನಾಥ (27) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರು ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಗಾರೆ ಕೆಲಸದವರಾಗಿದ್ದು ಧರ್ಮಸ್ಥಳಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ನೀರಚಿಲುಮೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…