ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಓಡಿಸಲಿದೆ.
ರೈಲು ಸಂಖ್ಯೆ 06597 ಬೆಂಗಳೂರು ಕಂಟೋನ್ಮೆಂಟ್–ಮಡಗಾಂವ್ ವಿಶೇಷ ಎಕ್ಸ್‌ಪ್ರೆಸ್ ಅ.1ರಂದು (ಗುರುವಾರ) ರಾತ್ರಿ 11.50ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಟು, ಅ.2ರಂದು (ಶುಕ್ರವಾರ) ಸಂಜೆ 6.10ಕ್ಕೆ ಮಡಗಾಂವ್ ತಲುಪಲಿದೆ.
ಮರುಪ್ರಯಾಣದಲ್ಲಿ ರೈಲು ಸಂಖ್ಯೆ 06598 ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್‌ಪ್ರೆಸ್ ಅ.4ರಂದು (ಭಾನುವಾರ) ಬೆಳಗ್ಗೆ 8.40ಕ್ಕೆ ಮಡಗಾಂವ್‌ನಿಂದ ಹೊರಟು, ಅದೇ ದಿನ ರಾತ್ರಿ 11.55ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಬಂಟ್ವಾಳ ಸೇರಿದಂತೆ ನಿಲುಗಡೆ:
ಎರಡೂ ಮಾರ್ಗಗಳಲ್ಲಿ ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ, ಕಾರವಾರ ಮತ್ತು ಕನಕೋನ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.
23 ಬೋಗಿಗಳ ರೈಲು:
ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಒಳಗೊಂಡಿರಲಿದೆ. ಇದರಲ್ಲಿ ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, 10 ಸ್ಲೀಪರ್ ಕ್ಲಾಸ್, ಏಳು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ದಿವ್ಯಾಂಗ ಸ್ನೇಹಿ ವಿಭಾಗ ಹೊಂದಿರುವ ಎರಡು ಸೆಕೆಂಡ್ ಕ್ಲಾಸ್ ಕಮ್ ಲಗೇಜ್ ಮತ್ತು ಬ್ರೇಕ್ ವ್ಯಾನ್ ಬೋಗಿಗಳು ಇರಲಿವೆ.
ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…