ಉಡುಪಿ

ಮರಳು ಸಮಸ್ಯೆಯ ಉರುಳು ತೆಗೆಯಲು ಶತಪ್ರಯತ್ನ: ಶಾಸಕ ರಘುಪತಿಭಟ್

ಉಡುಪಿ: ಉದ್ಯಮಿ ಬಿ.ಆರ್‌ ಶೆಟ್ಟಿ ಅವರು 200 ಹಾಸಿಗೆಯ ಆಸ್ಪತ್ರೆಯನ್ನು ಸರ್ಕಾರಕ್ಕೆ ಕೊಡದ ಹೊರತು 400 ಹಾಸಿಗೆಯ ಖಾಸಗಿ ಆಸ್ಪತ್ರೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಶಾಸಕ ರಘುಪತಿ ಭಟ್‌ ತಿಳಿಸಿದರು. ಜಿಲ್ಲೆಯ ವೈದ್ಯಾಧಿಕಾರಿ ನೇತೃತ್ವದಲ್ಲಿಯೇ ಈಗಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ನಡೆಯಬೇಕು. ಈಗ ಇರುವ ವೈದ್ಯರು ಹಾಗೂ ಸಿಬ್ಬಂದಿಯೇ ಮುಂದುವರೆಯಬೇಕು. ನಗರದ ಹೃದಯಭಾಗದಲ್ಲಿರುವ ದುಬಾರಿ ಬೆಲೆಯ ಸರ್ಕಾರಿ ಜಾಗವನ್ನು ಬಿ.ಆರ್. ಶೆಟ್ಟಿ ಅವರಿಗೆ ನೀಡಲಾಗಿದೆ. ಆದ್ದರಿಂದ ಸರ್ಕಾರಿ ಆಸ್ಪತ್ರೆ ನಡೆಸಲು ಬೇಕಾಗಿರುವ ಹೆಚ್ಚುವರಿ ಸಿಬ್ಬಂದಿ ಹಾಗೂ ಇತರೆ ಸೌಲಭ್ಯವನ್ನು ಒದಗಿಸಬೇಕು. ಅದರ ಉಸ್ತುವಾರಿಯನ್ನು ಜಿಲ್ಲಾ ವೈದ್ಯಧಿಕಾರಿ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೆ ಸರ್ಕಾರ ಹಾಗೂ ಬಿ.ಆರ್‌ ಶೆಟ್ಟಿ ಅವರು ಮಾಡಿಕೊಂಡ ಒಪ್ಪಂದದಲ್ಲಿ ಬದಲಾವಣೆ ಮಾಡಬೇಕು. ಜಿಲ್ಲಾ ವೈದ್ಯಾಧಿಕಾರಿ ನೇತೃತ್ವದಲ್ಲಿ ಒಂದು ಸಮಿತಿ ರಚನೆಯಾಗಬೇಕು. ಅದರಲ್ಲಿ ಜನಪ್ರತಿನಿಧಿಯೂ ಇರಬೇಕು. ಹಾಜಿ ಅಬ್ದುಲ್ಲಾ ಅವರ ಹೆರಿನಲ್ಲಿಯೇ ಜನರಿಗೆ ಸೇವೆ ನೀಡಬೇಕು. ಖಾಸಗಿ 400 ಹಾಸಿಗೆ ಆಸ್ಪತ್ರೆಗೆ ಯಾವ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಿ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೆ ಅದರ ಆದರ ಕತೆಯೇ ಬೇರೆಯಾಗಿತ್ತು. ಕ್ಷೇತ್ರದ ಶಾಸಕನಾಗಿ ಆಸ್ಪತ್ರೆ ಉಳಿವಿಗಾಗಿ ಏನೆಲ್ಲಾ ಹೋರಾಟ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು.
ಜಿಲ್ಲೆಯಲ್ಲಿ ಮರಳಿನ ಸಮಸ್ಯೆ ಇರುವುದರಿಂದ ಅಭಿವೃದ್ಧಿಗೆ ಅಡಚಣೆಯಾಗಿದೆ. ಚುನಾವಣೆಯ ನೀತಿ ಸಂಹಿತೆ ಜೂನ್‌ 15ವರೆಗೆ ಇರುವುದರಿಂದ ಅಧಿಕಾರಿಗಳ ಜೊತೆ ಸಭೆ ನಡೆಸಲು ಸಾಧ್ಯವಾಗುತ್ತಿಲ್ಲ. ಜೂನ್‌ನಿಂದ ಅಗಸ್ಟ್‌ ವರೆಗೆ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧವಿದೆ. ನಂತರ ದಿನದಲ್ಲಿ ಮರಳುಗಾರಿಗೆಯ ನೀತಿಯನ್ನು ಸರಳಗೊಳಿಸಲಾಗುತ್ತದೆ. ಅವೈಜ್ಞಾನಿಕವಾಗಿ ದೋಣಿಗೆ ಆಳವಡಿಸಲಾದ ಜಿಪಿಎಸ್‌ ತೆಗೆದು ಹಾಕುವ ಕುರಿತು ಚಿಂತನೆ ನಡೆಸಲಾಗುತ್ತದೆ ಎಂದು ಹೇಳಿದರು.
Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago