Featured

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ – vishwanews24

13 ವರ್ಷಗಳ ದಾಂಪತ್ಯ ಜೀವನ ಅಂತ್ಯ – ಪತ್ನಿ ಶಾಲಿನಿ ತಲ್ವಾರ್ ಗೆ ವಿಚ್ಛೇದನ ನೀಡಿದ ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್

ಬಾಲಿವುಡ್ ಖ್ಯಾತ ಗಾಯಕ  ಹನಿ ಸಿಂಗ್ ತಮ್ಮ ಹದಿಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯವಾಡಿದ್ದಾರೆ. ಪತ್ನಿ ಶಾಲಿನಿ ತಲ್ವಾರ್ ಮತ್ತು ಹನಿ ಸಿಂಗ್  ಅಧಿಕೃತವಾಗಿ ಬೇರೆಯಾಗಿದ್ದಾರೆ. ನಿನ್ನೆ ದೆಹಲಿ ಫ್ಯಾಮಿಲಿ ಕೋರ್ಟ್ ಈ ಜೋಡಿಗೆ ವಿಚ್ಛೇದನ ನೀಡಿದೆ. ಹನಿ ಸಿಂಗ್ ಮತ್ತು ಶಾಲಿನಿ 2011ರ ಜನವರಿಯಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.

ಪಂಜಾಬಿ ಖ್ಯಾತ ಗಾಯಕ, ಬಾಲಿವುಡ್ ನಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಹನಿ ಸಿಂಗ್  ಕೊನೆಗೂ ತಮ್ಮ ಪತ್ನಿ ಶಾಲಿನಿ ತಲ್ವಾರ್ ಅವರಿಗೆ ವಿಚ್ಛೇದನ ನೀಡಿದ್ದಾರೆ. ಕಳೆದ ವರ್ಷವಷ್ಟೇ ಹನಿ ಸಿಂಗ್ ಮೇಲೆ ಅವರ ಪತ್ನಿ ದೈಹಿಕ ಹಿಂಸಾಚಾರದ ಆರೋಪ ಮಾಡಿದ್ದರು. ಪತಿಯಿಂದ ತಮಗೆ ತುಂಬಾ ಹಿಂಸೆ ಆಗುತ್ತಿದೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೆ ಹನಿ ಸಿಂಗ್ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದರು.

ದೆಹಲಿ (Delhi) ಕೋರ್ಟ್ ನಲ್ಲಿ ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ್ದ ಹನಿ ಸಿಂಗ್ ಮತ್ತು ಅವರ ಪತ್ನಿ ಶಾಲಿನಿ (Shalini)ಯು ನ್ಯಾಯಾಧೀಶರ ಎದುರು ಸೆಟಲ್ ಮೆಂಟ್ ಮಾಡಿಕೊಂಡು, ಪತ್ನಿಗೆ ಜೀವನಾಂಶವಾಗಿ ಒಂದು ಕೋಟಿ ರೂಪಾಯಿ ನೀಡಿದ್ದಾರೆ. ಅದು ಚೆಕ್ ಮೂಲಕ ನೀಡಿದ್ದಾರೆ. 2001ರಲ್ಲಿ ಈ ಜೋಡಿ ವಿವಾಹವಾಗಿದ್ದು, ಆ ನಂತರ ಮನಸ್ತಾಪಗಳು ಬಂದಿದ್ದವು. ಕಳೆದ ವರ್ಷವಂತೂ ಇಬ್ಬರೂ ಸೋಷಿಯಲ್ ಮೀಡಿಯಾದಲ್ಲಿ ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡಿದ್ದರು.

ತಮ್ಮ ಮೇಲೆ ಪತಿ ದೈಹಿಕವಾಗಿ ಹಿಂಸೆ ಮಾಡಿದ್ದಾನೆ ಎಂದು ಶಾಲಿನಿ ಬಹಿರಂಗವಾಗಿಯೇ ಸೋಷಿಯಲ್ ಮೀಡಿಯಾದಲ್ಲಿ ಪತ್ರವನ್ನು ಬರೆದಿದ್ದರು. ಹನಿ ಸಿಂಗ್ ಕುಟುಂಬದ ಬಗ್ಗೆಯೂ ಆರೋಪಗಳನ್ನು ಮಾಡಿದ್ದರು. ಆನಂತರ ಹನಿ ಸಿಂಗ್ ಕೂಡ ಮಾಧ್ಯಮಗಳ ಮುಂದೆ ಬಂದು ಎಲ್ಲ ಆರೋಪಗಳನ್ನು ನಿರಾಕರಿಸಿದ್ದರು. ಅಲ್ಲದೇ, ಶಾಲಿನಿಯಿಂದ ದೂರ ಹೋಗುವುದಾಗಿಯೂ ಹೇಳಿಕೊಂಡಿದ್ದರು. ಈ ಮೂಲಕ ಅವರು ಡಿವೋರ್ಸ್ ಗೆ (Divorce) ಅರ್ಜಿ ಸಲ್ಲಿಸಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago