ದಕ್ಷಿಣ ಕನ್ನಡ

ಕರಾವಳಿಯಲ್ಲಿ ಮತ್ತೊಮ್ಮೆ ಆರ್ಭಟಿಸುತ್ತಿದ್ದಾನೆ ಮಳೆರಾಯ!

ಉಡುಪಿ/ದಕ್ಷಿಣಕನ್ನಡ: ಒಂದು ವಾರ ವಿರಾಮ ನೀಡಿದ ಬಳಿಕ ಮಳೆರಾಯ ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟ ಮುಂದುವರಿಸಿದ್ದಾನೆ.

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದ ಹಿಂದೆ ಆದ ಅವಾಂತರಗಳಿಂದ ಜನಸಾಮಾನ್ಯರು ಹೊರಬರುವಷ್ಟರಲ್ಲಿ ಮತ್ತೆ ಮಳೆರಾಯನ ಆಗಮನ ಜೋರಾಗಿದೆ. ಜಿಲ್ಲೆಯ ಮಲೆನಾಡು ಭಾಗವಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಕಳಸ ಭಾಗದಲ್ಲಿ ಬೆಳಗ್ಗಿನಿಂದಲೂ ಕಪ್ಪನೆಯ ಕಾರ್ಮೋಡ ಕವಿದು ಮಳೆ ಸುರಿಯುತ್ತಿದೆ. ಇದರ ನಡುವೆಯೂ ರೈತರು ತಮ್ಮ ಜಮೀನುಗಳನ್ನು ಉಳುಮೆ ಮಾಡಿಕೊಂಡು, ಬಿತ್ತನೆ ಕೆಲಸಕ್ಕೆ ಮುಂದಾಗಿದ್ದಾರೆ.

ಚಾರ್ಮಾಡಿ ಘಾಟ್‍ನಲ್ಲೂ ಕೂಡ ಮಳೆ ಬೀಳುತ್ತಿದ್ದು, ದಟ್ಟವಾದ ಮಂಜು ಕವಿದಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದಾರೆ. ಹೆಚ್ಚಿನ ಮಂಜು ಕವಿದ ಕಾರಣದಿಂದ ಚಾರ್ಮಾಡಿ ಘಾಟ್‍ನಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ದಕ್ಷಿಣಕನ್ನಡದಲ್ಲಿ ಬೆಳಗ್ಗಿನಿಂದಲೂ ವರುಣ ತನ್ನ ಆರ್ಭಟ ಮುಂದುರಿಸಿದ್ದಾನೆ. ಹಲವು ರಸ್ತೆಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಮತ್ತೆ ನೆರೆಯ ಆತಂಕ ಸೃಷ್ಟಿಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಬೈಂದೂರಲ್ಲೂ ಬಿರುಸಿನ ಮಳೆ ಬೀಳುತ್ತಿದೆ. ಭಾರೀ ಮೋಡ ಮುಸುಕಿದ ವಾತಾವರಣವಿದ್ದು, ದಿನವಿಡೀ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಮಳೆ ಜೊತೆ ಗಾಳಿ ಬೀಸುತ್ತಿದೆ. ನಾಡದೋಣಿ ಮೀನುಗಾರರಿಗೆ ಜಿಲ್ಲಾಡಳಿತ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಜಿಲ್ಲೆಯ ನದಿ, ಕೆರೆ ತೊರೆಗಳು ತುಂಬಿ ಹರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅರಬ್ಬೀ ಸಮುದ್ರದಲ್ಲಿ ಗಂಟೆಗೆ ಸುಮಾರು 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದೆ. ಸಮುದ್ರ ತೀರದ ಜನ ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಲಾಗಿದೆ.

ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್ ರೆಡ್ಡಿಯವರು ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದರು. ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಹೆಚ್ಚು ಮಳೆ ಬೀಳಲಿದೆ. ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಅವರು ತಿಳಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago