Featured

137 ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ  : ಡಾ.ಜಿ.ಪರಮೇಶ್ವರ್ – vishwanews24

137 ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ  : ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು

Vishwa News 24

Recent Posts

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

5 minutes ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

17 minutes ago

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ – vishwanews24

ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…

24 minutes ago

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ- vishwanews24

ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…

29 minutes ago

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago