ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು
ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…
ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…
ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಂದು ಬ್ರೇಕ್‌ಫಾಸ್ಟ್…
DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…