ದೇಶದ ಹಲವೆಡೆ ಇತ್ತೀಚಿನ ದಿನಗಳಲ್ಲಿ ಈ ಸ್ಕೂಟರ್‌ಗಳ ಬ್ಯಾಟರಿ ಸ್ಪೋಟಗೊಂಡು ಜನರ ಜೀವಹಾನಿಯಾಗುತ್ತಿರುವ ಅನೇಕ ಘಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕರಿಗೆ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದರು. ಅಲ್ಲದೇ ದೋಷಯುಕ್ತವಾಗಿರುವ ವಾಹನಗಳನ್ನು ಹಿಂಪಡೆಯುವಂತೆ ಸೂಚಿಸಿದ್ದರು. ದೇಶದಲ್ಲಿ ಈವರೆಗೆ ಮೂರು ಪ್ಯೂರ್ ಇವಿ, ಒಂದು ಓಲಾ, ಒಂದು ಬೂಮ್, ಎರಡು ಓಕಿನಾವಾ ಮತ್ತು 20 ಜಿತೇಂದ್ರ ಇವಿ ಸ್ಕೂಟರ್‌ಗಳಿಗೆ ಬೆಂಕಿ ಹೊತ್ತುಕೊಂಡಿದೆ. ಈ ಹಿನ್ನೆಲೆಯಲ್ಲಿ ಕಂಪೆನಿಗಳು ತಮ್ಮ ವಾಹನಗಳನ್ನು ಹಿಂತೆಗೆದುಕೊಳ್ಳುತ್ತಿವೆ. ಒಕಿನಾವಾ ಆಟೋಟೆಕ್ ಕೂಡಾ 3,000 ಯೂನಿಟ್, ಪ್ಯೂರ್ ಇವಿ ಸುಮಾರು 2,000 ಯುನಿಟ್‌ಗಳನ್ನು ಇತ್ತೀಚೆಗೆ ಹಿಂಪಡೆದುಕೊಂಡಿವೆ.
1,441 ಸ್ಕೂಟರ್‌ಗಳ ಬ್ಯಾಚ್ ಹಿಂಪಡೆದ ಓಲಾ ಎಲೆಕ್ಟ್ರಿಕ್ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ಮಾರ್ಚ್ 26 ರಂದು ಪುಣೆಯಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಹೀಗಾಗಿ ಓಲಾ ತನ್ನ 1,441 ಸ್ಕೂಟರ್‌ಗಳ ಬ್ಯಾಚ್ ಅನ್ನು ಹಿಂತೆಗೆದುಕೊಂಡಿದೆ. ತಪಾಸಣೆ ಸಲುವಾಗಿ ಸ್ವಯಂಪ್ರೇರಿತವಾಗಿ ಹಿಂತೆಗೆದುಕೊಳ್ಳಲಾಗಿದೆ ಎಂದು ಕಂಪೆನಿ ಹೇಳಿದೆ. ಬ್ಯಾಟರಿ ವ್ಯವಸ್ಥೆ ತಪಾಸಣೆ, ಥರ್ಮಲ್ ಸಿಸ್ಟಮ್, ಇತರ ಸುರಕ್ಷಿತಾ ವ್ಯವಸ್ಥೆಗಳನ್ನು ಕಂಪೆನಿ ಪರೀಕ್ಷಿಸಲಿದೆ.
ಅಲ್ಲದೆ ಪೊಲೀಸರು ಇವಿ ಸ್ಕೂಟರ್ ತಯಾರಕರ ವಿರುದ್ಧ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 174 ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. ಸ್ಕೂಟರ್ ಖರೀದಿಸಿದ ಒಂದು ದಿನದಲ್ಲೇ ಬ್ಯಾಟರಿ ಸ್ಪೋಟವಾಗಿರುವ ಪ್ರಕರಣಗಳೂ ದೇಶದಲ್ಲಿ ಘಟಿಸಿವೆ. ಇವಿ ಸ್ಕೂಟರ್‌ಗಳ ತಯಾರಕರಿಗೆ ‘ಗುಣಮಟ್ಟ-ಕೇಂದ್ರಿತ’ ಮಾರ್ಗಸೂಚಿಯನ್ನು ಪ್ರಕಟಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಇದನ್ನು ನಿರ್ಲಕ್ಷ್ಯ ಮಾಡಿದ್ದಲ್ಲಿ ಭಾರೀ ದಂಡ ಬೀಳುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅಲ್ಲದೆ, ಇವುಗಳ ಸಮಸ್ಯೆ ಪರಿಶೀಲಿಸಲು ಮತ್ತು ಮಾರ್ಗಸೂಚಿಗಳಿಗೆ ಶಿಫಾರಸ್ಸು ಸಲ್ಲಿಸುವ ಸಲುವಾಗಿ ತಜ್ಞರ ಸಮಿತಿಯನ್ನೂ ಕೇಂದ್ರ ರಚಿಸಲಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…