Featured

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ಗೇಟ್ ತೆರವು  : ಕೇಂದ್ರ ಸಚಿವ ಗಡ್ಕರಿ ಭರವಸೆ – Vishwanews24

15 ದಿನಗಳ ಒಳಗೆ ಸುರತ್ಕಲ್‌ ಟೋಲ್‌ ಗೇಟ್ ತೆರವು  : ಕೇಂದ್ರ ಸಚಿವ ಗಡ್ಕರಿ ಭರವಸೆ

ಸುರತ್ಕಲ್‌ : 15 ದಿನಗಳ ಒಳಗಾಗಿ ಸುರತ್ಕಲ್‌ ನ ಟೋಲ್‌ ಗೇಟನ್ನು ತೆರವುಗೊಳಿಸುವುದಾಗಿ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಭರವಸೆಯನ್ನು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಟ್ರಕ್‌ ಮಾಲಕರ ಸಂಘದ ಅಧ್ಯಕ್ಷ ಸುನೀಲ್‌ ಡಿ’ಸೋಜಾ ಅವರು ತಿಳಿಸಿದ್ದಾರೆ.

ಕೂಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ನಮ್ಮ ಸಂಘದ ರಾಜ್ಯಾಧ್ಯಕ್ಷ ಡಾ| ಜಿ.ಆರ್‌.ಷಣ್ಮುಗಪ್ಪ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರನ್ನು ಸೆ. 9ರಂದು ಟ್ರಾನ್ಸ್‌ ಪೋರ್ಟ್‌ ಮೀಟ್‌ ಸಭೆಯ ಬಳಿಕ ಭೇಟಿ ಮಾಡಿ ಟೋಲ್‌ ಗೇಟ್‌ ತೆರವು ಬಗ್ಗೆ ಮನವಿ ನೀಡಿದ್ದರು. ಇದಕ್ಕೆ ಸಚಿವರಿಂದ ಭರವಸೆ ದೊರಕಿದೆ. ಟೋಲ್‌ ಗೇಟ್‌ ವಿರೋಧಿ ಸಮಿತಿ ನಡೆಸಲು ಉದ್ದೇಶಿಸಿರುವ ಧರಣಿಯಲ್ಲಿ ನಾವೂ ಭಾಗಿಯಾಗುತ್ತೇವೆ. ಸರಕಾರ ಮಾತು ತಪ್ಪಿದಲ್ಲಿ ಟ್ರಕ್‌ಗಳ ಮೂಲಕ ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕುತ್ತೇವೆ ಎಂದರು.

ಮಾತಿನಲ್ಲಿ ಹಿಡಿತವಿರಲಿ,ಪರರನ್ನು ಅಗೌರವಿಸಬೇಡಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮಂಗಳೂರಿನಿಂದ ಲಾರಿಗಳಿಗೆ ಬಾಡಿಗೆ ನಿಗದಿ ಪಡಿಸುವ ಬಗ್ಗೆ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಹಾಗೂ ಇತರರೊಂದಿಗೆ ನಮ್ಮ ಸಂಘದ ಮಹತ್ವದ ಸಭೆ ಸೆ. 13ರಂದು ಮಂಗಳೂರಿನಲ್ಲಿ ನಡೆಯಲಿದೆ. ಜಂಟಿ ಸಭೆಯಲ್ಲಿ ದರ ನಿಗದಿ ಪಡಿಸಿ ಜಾರಿಗೆ ತರುತ್ತೇವೆ. ಇದಕ್ಕೆ ವಿರೋಧ ಕಂಡುಬಂದಲ್ಲಿ ಲಾರಿ ಮುಷ್ಕರ ಸಹಿತ ನಮ್ಮ ಪ್ರತಿಭಟನೆ ಮುಂದಿನ ದಿನಗಳಲ್ಲಿ ಉಗ್ರವಾಗಿ ನಡೆಯಲಿದೆ ಎಂದು ತಿಳಿಸಿದರು.

ಇನ್ನು ಸುರತ್ಕಲ್‌ ಟೋಲ್‌ ಗೇಟ್‌ ಮುಂಭಾಗ ಇಂದು ಹಮ್ಮಿಕೊಂಡಿರುವ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಈ ಧರಣಿಗೆ ಟ್ಯಾಕ್ಸಿಮೆನ್ಸ್‌ ಮತ್ತು ಮ್ಯಾಕ್ಸಿ ಕ್ಯಾಬ್‌ ಅಸೋಸಿಯೇಶನ್‌, ಉಭಯ ಜಿಲ್ಲೆಗಳ ಬಸ್‌ ಮಾಲಕರ ಸಂಘಟನೆಗಳು, ಕಾರ್ಮಿಕರ ಸಂಘಟನೆಗಳು, ವಿವಿಧ ಪಕ್ಷಗಳು ಸೇರಿದಂತೆ ಹಲವು ಸಂಘ- ಸಂಸ್ಥೆಗಳು ಭಾಗವಹಿಸುವುದಾಗಿ ಘೋಷಿಸಿವೆ.” ಎಂದು ತಿಳಿದು ಬಂದಿದೆ.

ಕಾರ್ಕಳ : ಖಾಸಗಿ ಬಸ್ ಹಾಗೂ ಪಿಕಪ್ ಢಿಕ್ಕಿ : ಪಿಕಪ್ ಚಾಲಕ ಸಾವು – Vishwanews24

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago