ನವದೆಹಲಿ: ಭಾರತೀಯ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಅಲಂಕರಿಸಿರುವ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 15 ದಿನಗಳ ಕಾಲ ಯೋಧರೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ.
ಅವರು ಜುಲೈ 31ರಿಂದ 15 ದಿನಗಳ ಕಾಲ ಕಾಶ್ಮೀರದ ಗಡಿಯಲ್ಲಿ ಸೇನಾ ಸಮವಸ್ತ್ರ ಧರಿಸಿ ಗಸ್ತು ತಿರುಗಲಿದ್ದಾರೆ.
15 ದಿನಗಳ ಕಾಲ ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಎಂ.ಎಸ್. ಧೋನಿಯವರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ. ಈ ಅವಧಿಯಲ್ಲಿ ಅವರು ಸೇನೆಯೊಂದಿಗೆ ಇದ್ದು, ಗಸ್ತು, ಕಾವಲು ಕರ್ತವ್ಯಗಳನ್ನು ಮಾಡಲಿದ್ದಾರೆ.
ಇನ್ನು ಈಗಾಗಲೇ ವಿಶ್ವಕಪ್ ಟೂರ್ನಿ ಮುಗಿದಿದ್ದು, ಈ ಹಿನ್ನೆಲೆಯಲ್ಲಿ ಮಹೇಂದ್ರ ಸಿಂಗ್ ಧೋನಿ ಸೇನೆಯಲ್ಲಿ ತರಬೇತಿ ಪಡೆಯಲು ಮುಂದಾಗಿದ್ದರು. ಹಾಗೂ ದೇಶ ಸೇವೆ ನಡೆಸಲು ನಿರ್ಧರಿಸಿದ್ದರು.
ಭಾರತಕ್ಕೆ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಹೀರೋ ಧೋನಿ ಯೋಧರಂತೆಯೇ ದಿನಚರಿ ಆರಂಭಿಸುತ್ತಿದ್ದು, ಗಸ್ತು ತಿರುಗುವುದಕ್ಕೂ ಮೊದಲು ಸೇನಾ ತರಬೇತಿ ಪಡೆಯಲಿದ್ದಾರೆ. ಧೋನಿ ಸೇರಿರುವ ಬೆಟಾಲಿಯನ್ ‘106 ಟೆರಿಟೋರಿಯಲ್ ಆರ್ವಿು’ಯ ಮುಖ್ಯ ಕಚೇರಿ ಬೆಂಗಳೂರಿನಲ್ಲಿದ್ದರೂ ಅವರು ಗಡಿಯಲ್ಲಿ ಕಾರ್ಯನಿರ್ವಹಿಸಲು ತೆರಳಿದ್ದಾರೆ. 2011ರಲ್ಲಿ ಧೋನಿ, ಶೂಟರ್ ಅಭಿನವ್ ಬಿಂದ್ರಾ ಹಾಗೂ ವಿಜ್ಞಾನಿ ದೀಪಕ್ ರಾವ್ಗೆ ಭಾರತೀಯ ಸೇನೆಯಿಂದ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಿ ಗೌರವಿಸಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…