15 ಲಕ್ಷ ಪಡೆದು ವಂಚಿಸಿದ ಪ್ರಿಯಕರನಿಗೆ ಯುವತಿಯಿಂದ ಚಪ್ಪಲಿ ಏಟು -Vishwanews24

ಚಿತ್ರದುರ್ಗ: ಮದುವೆಯಾಗುವುದಾಗಿ ನಂಬಿಸಿ 15 ಲಕ್ಷ ರೂಪಾಯಿ ಪಡೆದು ಕೈಕೊಟ್ಟ ಪ್ರಿಯಕರನಿಗೆ ಯುವತಿ ಚಪ್ಪಲಿಯಿಂದ ಬಾರಿಸಿರುವ ಘಟನೆ ಚಿತ್ರದುರ್ಗದ ಬಡಾವಣೆ ಠಾಣೆ ಬಳಿ ನಡೆದಿದೆ.

ಉಮೇಶ್ ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದನು. ಈ ಕುರಿತು ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದಳು. ಹೀಗಾಗಿ ವಂಚನೆ ಪ್ರಕರಣ ಸಂಬಂಧ ಮಹಿಳಾ ಠಾಣೆಗೆ ವಿಚಾರಣೆಗಾಗಿ ಉಮೇಶ್ ಬಂದಿದ್ದನು.

 

ವಿಚಾರಣೆ ಮುಗಿಸಿ ಯುವಕ ತೆರಳುತ್ತಿದ್ದ ಇನ್ನೋವಾ ಕಾರನ್ನ ಅಡ್ಡಗಟ್ಟಿ ಯುವತಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ನಂತರ ಆರೋಪಿ ಉಮೇಶನಿಗೆ ಯುವತಿ ಮತ್ತು ಆಕೆಯ ಪೋಷಕರು ಸಖತ್ ಗೂಸಾ ಕೊಟ್ಟಿದ್ದಾರೆ. ಈ ವೇಳೆ ಪೊಲೀಸರು ಅವರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಆದರೂ ಯುವತಿ ಮೋಸ ಮಾಡಿದ್ದಕ್ಕೆ ಪ್ರಿಯಕರನಿಗೆ ಚಪ್ಪಲಿಯಿಂದ ಬಾರಿಸಿದ್ದಾಳೆ.

ಏನಿದು ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚೌಳಕೆರೆ ಗ್ರಾಮದ ಉಮೇಶ್ ಪ್ರೀತಿ ಹೆಸರಲ್ಲಿ ವಂಚಿಸಿದ್ದನು. ಕಳೆದ ಮೂರು ವರ್ಷಗಳ ಹಿಂದೆ ಡಿಪ್ಲೋಮಾ ಮಾಡುತ್ತಿದ್ದ ಕೆಳಗೋಟೆಯ ಯುವತಿ ಜೊತೆ ಸ್ನೇಹ ಬೆಳೆಸಿದ್ದನು. ಬಳಿಕ ಮೊಬೈಲ್‍ನಲ್ಲಿ ಮಾತಿನಿಂದಲೇ ಯುವತಿಯ ಮನಸೆಳೆದು ಪ್ರೀತಿ ಎಂಬ ಹಳ್ಳಕ್ಕೆ ಬೀಳಿಸಿದ್ದನು. ನಂತರ ಯುವತಿಯ ಮನೆಯಲ್ಲಿ ನಾಟಕ ಮಾಡಿ ಎರಡು ಕುಟುಂಬದ ನಡುವೆ ಮಾತುಕಥೆ ನಡೆಸಿ ಮದುವೆಗೂ ಒಪ್ಪಿಸಿದ್ದನು. ಹೀಗಾಗಿ ಯುವತಿ ಉಮೇಶ್‍ನನ್ನು ತುಂಬಾ ನಂಬಿದ್ದಳು. ಆದರೆ ಉಮೇಶ್ ಆಕೆಗೆ ಮೋಸ ಮಾಡಿ ಅವಳಿಂದ 15 ಲಕ್ಷ ರೂಪಾಯಿ ಹಣವನ್ನು ಪೀಕಿದ್ದನು. ತನ್ನ ಉನ್ನತ ವ್ಯಾಸಂಗಕ್ಕಾಗಿ ಸಂಗ್ರಹಿಸಿಟ್ಟಿದ್ದ ಹಣವನ್ನು ವಂಚಕನಿಗೆ ಕೊಟ್ಟು ಖಾಲಿ ಕೈ ಆದ ಬಳಿಕ ಯುವತಿಗೆ ವಂಚಿಸಿರೋ ಆಸಾಮಿಯ ಅಸಲಿ ಬಣ್ಣ ಬಯಲಾಗಿದೆ.

 

ಈಕೆಗಷ್ಟೇ ಅಲ್ಲದೇ ಅನೇಕ ಯುವತಿಯರು ಹಾಗೂ ಮಹಿಳೆಯರೊಂದಿಗೆ ಈತ ಪ್ರೀತಿಯ ನಾಟಕವಾಡಿ ಕೆಲವರೊಂದಿಗೆ ಅಕ್ರಮ ಸಂಬಂಧವನ್ನು ಸಹ ಹೊಂದಿದ್ದನು. ಈ ಸತ್ಯ ಉಮೇಶ್‍ನ ಮೊಬೈಲ್‍ನಿಂದಲೇ ಬಯಲಾಗಿದೆ. ಇದರಿಂದಾಗಿ ಈತನ ಅಸಲಿ ಬಂಡವಾಳ ಅರಿತ ಯುವತಿ ತಾನು ಕೊಟ್ಟ ಲಕ್ಷಾಂತರ ರೂಪಾಯಿ ಹಣವನ್ನು ವಾಪಸ್ ಕೇಳಿದ್ದಾಳೆ. ಆಗ ಇನ್ನುಳಿದ ಪ್ರೇಮಿಗಳಂತೆ ನಿನ್ನ ಜೊತೆಯೂ ಚೆನ್ನಾಗಿರ್ತೆನೆಂದು ದೌರ್ಜನ್ಯವೆಸೆಗಿದ್ದಾನೆ. ಹೀಗಾಗಿ ಮನನೊಂದ ಯುವತಿ ಚಿತ್ರದುರ್ಗದ ಮಹಿಳಾ ಠಾಣೆ ಪೊಲೀಸರ ಮೊರೆ ಹೋಗಿದ್ದಳು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago