15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ – Vishwanews24
15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ
ಸುಬ್ರಹ್ಮಣ್ಯ : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಅಂತಿಮ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 15 ದಿನದೊಳಗೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, 15 ಸಾವಿರ ಶಿಕ್ಷಕರ ಸಿಇಟಿ ಈಗಾಗಲೇ ಆಗಿದ್ದು, ಕಾನೂನು ಕಾರಣಕ್ಕೆ ಸ್ವಲ್ಪ ವಿಳಂಬವಾಗಿದ್ದು, ಶೀಘ್ರದಲ್ಲೇ ನೇಮಕಾತಿ ಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಚಿತ್ರೀಕರಣ ವೇಳೆ ಅಪಘಾತ: ತಮಿಳಿನ ಖ್ಯಾತ ನಟ ವಿಜಯ್ ಆಂಟನಿ ಗಂಭೀರ ಗಾಯ – Vishwanews24
ರಾಜ್ಯದಲ್ಲಿ ಈ ವರ್ಷ 400- 500 ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಅತಿಥಿ ಶಿಕ್ಷಕರಿಗೆ ವೇತನ ಪಾವತಿ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಅತಿಥಿ ಶಿಕ್ಷಕರಿಗೆ ಒಂದೆರಡು ತಿಂಗಳು ತಡ ಆಗಬಹುದು ಅಥವಾ ಆರಂಭದಲ್ಲಿ ತಡ ಆಗಬಹುದು ಹೊರತು ವೇತನ ಪಾವತಿ ಆಗದೇ ಇರುವುದಿಲ್ಲ ಹೇಳಿದ್ದಾರೆ.
Join our Whatsapp group by clicking the below link 👇👇
