Featured

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ – vishwanews24

150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಇನ್ನಿಲ್ಲ

ಮಂಗಳೂರು: ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಕೋಣ “ಬೋಳಾರ ಕುಟ್ಟಿ’ ಕೋಣ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದೆ.

ಸುರತ್ಕಲ್ ಸರ್ವೋತ್ತಮ ಮಾಧವ ಪ್ರಭು ಅವರಲ್ಲಿದ್ದ ಕುಟ್ಟಿ 92 ಪದಕವನ್ನು ಪಡೆದಿತ್ತು. ಬಳಿಕ 2019ರಲ್ಲಿ ಬೋಳಾರ ತ್ರಿಶಾಲ್ ಕೆ.ಪೂಜಾರಿ ಅವರು ಕುಟ್ಟಿಯನ್ನು ಖರೀದಿಸಿದ್ದರು. ಮಿಂಚಿನ ಓಟದೊಂದಿಗೆ ಅಡ್ಡಹಲಗೆ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಸ್ಥಾನ ಪಡೆದಿತ್ತು.

ಅಡ್ಡ ಹಲಗೆ ಹಾಗೂ ಕನೆಹಲಗೆ ವಿಭಾಗದಲ್ಲಿ ಕುಟ್ಟಿ ಅಭೂತಪೂರ್ವ ಸಾಧನೆ ಮೂಲಕ ಎಲ್ಲರ ಗಮನ ಸೆಳೆದಿತ್ತು. ಕನೆಹಲಗೆ ವಿಭಾಗದಲ್ಲಿ ಕುಟ್ಟಿಯು ನಿಶಾನೆಗೆ ನೀರು ಚಿಮ್ಮಿಸುವ ಮೂಲಕ ಹಲವು ಬಾರಿ ಪದಕ ಪಡೆದಿತ್ತು.

ಅಡ್ಡ ಹಲಗೆ ಹಾಗೂ ಕನೆ ಹಲಗೆ ವಿಭಾಗದಲ್ಲಿ ತ್ರಿಶಾಲ್ ಕೆ.ಪೂಜಾರಿ ಅವರಿಗೆ 50ಕ್ಕೂ ಮಿಕ್ಕಿ ಪದಕಗಳನ್ನು ದೊರಕಿಸಿಕೊಟ್ಟ ಕುಟ್ಟಿ ಒಟ್ಟು 150ಕ್ಕೂ ಮೀರಿ ಪದಕಗಳನ್ನು ತನ್ನದಾಗಿಸಿದೆ. ಅಡ್ಡಹಲಗೆಯ ವಿಭಾಗದಲ್ಲಿ ಕುಟ್ಟಿ ಚಾಂಪಿಯನ್ ಗೌರವವನ್ನೂ ಪಡೆದಿತ್ತು. ಕಳೆದ ವರ್ಷದ ಕಂಬಳದ ವೇಳೆ ಅದರ ಕೊಂಬಿಗೆ ಗಾಯವಾಗಿತ್ತು. ಬಳಿಕ ವೈದ್ಯರಲ್ಲಿ ಪರೀಕ್ಷಿಸಿದಾಗ ಅದಕ್ಕೆ ಅನಾರೋಗ್ಯದ ಮಾಹಿತಿ ತಿಳಿಯಿತು. ಅದರ ಬಳಿಕ ಕಂಬಳ ಕರೆಯ ಓಟ ನಿಲ್ಲಿಸಿತ್ತು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago