15,000 ಶಾಲಾ ಶಿಕ್ಷಕರ ನೇಮಕಾತಿ: ಇಂದು 4 ಗಂಟೆಗೆ ವೆಬ್ಸೈಟ್ನಲ್ಲಿ ಆಯ್ಕೆ ಪಟ್ಟಿ ಪ್ರಕಟ : ಸಚಿವ ಬಿ.ಸಿ ನಾಗೇಶ್ – Vishwanews24
15,000 ಶಾಲಾ ಶಿಕ್ಷಕರ ನೇಮಕಾತಿ: ಇಂದು 4 ಗಂಟೆಗೆ ವೆಬ್ಸೈಟ್ನಲ್ಲಿ ಆಯ್ಕೆ ಪಟ್ಟಿ ಪ್ರಕಟ : ಸಚಿವ ಬಿ.ಸಿ ನಾಗೇಶ್
ಬೆಂಗಳೂರು: ಹೈಕೋರ್ಟ್ ಸೂಚನೆಯ ಬಳಿಕ 15,000 ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈಗಾಗಲೇ ಶಿಕ್ಷಣ ಇಲಾಖೆ ಪ್ರಕಟಿಸಿತ್ತು. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಯ ನಂತ್ರ, ಇಂದು ಸಂಜೆ 4 ಗಂಟೆಗೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.
ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ ನೀಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. @BSBommai
— B.C Nagesh (@BCNagesh_bjp) March 8, 2023
15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ತಂದೆಯ ಆದಾಯವನ್ನು ಪರಿಗಣಿಸುವಂತೆ ಅನೇಕ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅರ್ಜಿಯನ್ನು ಪರಿಶೀಲನೆ ನಡೆಸಿ, ಪಟ್ಟಿಯನ್ನು ರದ್ದುಗೊಳಿಸಿ, ಹೊಸದಾಗಿ ಅಭ್ಯರ್ಥಿಗಳ ತಂದೆಯ ಆದಾಯ, ಜಾತಿಯನ್ನು ಪರಿಗಣಿಸುವಂತೆ ಸೂಚಿಸಿತ್ತು.
ಮುಸ್ಲಿಂ ರಾಜ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಉಡುಪಿಯಲ್ಲಿ ಅಲ್ಲ, ಗಂಗಾ ತೀರದಲ್ಲಿ : ಪೇಜಾವರ ಶ್ರೀ ಸ್ಪಷ್ಟನೆ
ಈ ಸೂಚನೆಯ ಬಳಿಕ ಶಿಕ್ಷಣ ಇಲಾಖೆಯಿಂದ ಕೆಲ ದಿನಗಳ ಹಿಂದೆ 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಅಲ್ಲದೇ ಆಕ್ಷೇಪಣೆಗಳಿದ್ದರೇ ಸಲ್ಲಿಸುವಂತೆಯೂ ತಿಳಿಸಿತ್ತು. ಈ ಬಳಿಕ ಇಂದು ಪರಿಷ್ಕರಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು 4 ಗಂಟೆಗೆ ಆಯೋಗದ ಜಾಲತಾಣ https://www.schooleducation.kar.nic.in/ ದಲ್ಲಿ ಪ್ರಕಟಿಸಲಿದೆ.
