Featured

15,000 ಶಾಲಾ ಶಿಕ್ಷಕರ ನೇಮಕಾತಿ: ಇಂದು 4 ಗಂಟೆಗೆ ವೆಬ್‌ಸೈಟ್‌ನಲ್ಲಿ ಆಯ್ಕೆ ಪಟ್ಟಿ ಪ್ರಕಟ : ಸಚಿವ ಬಿ.ಸಿ ನಾಗೇಶ್  – Vishwanews24

15,000 ಶಾಲಾ ಶಿಕ್ಷಕರ ನೇಮಕಾತಿ: ಇಂದು 4 ಗಂಟೆಗೆ ವೆಬ್‌ಸೈಟ್‌ನಲ್ಲಿ ಆಯ್ಕೆ ಪಟ್ಟಿ ಪ್ರಕಟ : ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಹೈಕೋರ್ಟ್ ಸೂಚನೆಯ ಬಳಿಕ 15,000 ಶಾಲಾ ಶಿಕ್ಷಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈಗಾಗಲೇ ಶಿಕ್ಷಣ ಇಲಾಖೆ  ಪ್ರಕಟಿಸಿತ್ತು. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಕೆಯ ನಂತ್ರ, ಇಂದು ಸಂಜೆ 4 ಗಂಟೆಗೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ.

ಈ ಕುರಿತಂತೆ ಟ್ವಿಟ್ ಮಾಡಿ ಮಾಹಿತಿ ನೀಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು, 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6-8) ನೇಮಕಾತಿ ಸಂಬಂಧಿಸಿದಂತೆ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಇಂದು 4 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿ  ಸಂಬಂಧ ತಂದೆಯ ಆದಾಯವನ್ನು ಪರಿಗಣಿಸುವಂತೆ ಅನೇಕ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಅರ್ಜಿಯನ್ನು ಪರಿಶೀಲನೆ ನಡೆಸಿ, ಪಟ್ಟಿಯನ್ನು ರದ್ದುಗೊಳಿಸಿ, ಹೊಸದಾಗಿ ಅಭ್ಯರ್ಥಿಗಳ ತಂದೆಯ ಆದಾಯ, ಜಾತಿಯನ್ನು ಪರಿಗಣಿಸುವಂತೆ ಸೂಚಿಸಿತ್ತು.

ಈ ಸೂಚನೆಯ ಬಳಿಕ ಶಿಕ್ಷಣ ಇಲಾಖೆಯಿಂದ ಕೆಲ ದಿನಗಳ ಹಿಂದೆ 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿತ್ತು. ಅಲ್ಲದೇ ಆಕ್ಷೇಪಣೆಗಳಿದ್ದರೇ ಸಲ್ಲಿಸುವಂತೆಯೂ ತಿಳಿಸಿತ್ತು. ಈ ಬಳಿಕ ಇಂದು ಪರಿಷ್ಕರಿಸಿ, ಅಂತಿಮ ಆಯ್ಕೆ ಪಟ್ಟಿಯನ್ನು 4 ಗಂಟೆಗೆ ಆಯೋಗದ ಜಾಲತಾಣ https://www.schooleducation.kar.nic.in/ ದಲ್ಲಿ ಪ್ರಕಟಿಸಲಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago