Featured

17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ – vishwanews24

17,800 ಅಂಗನವಾಡಿಗಳು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದ 17,800 ಅಂಗನವಾಡಿಗಳನ್ನು ಶೀಘ್ರದಲ್ಲೇ ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಹೇಳಿದರು.

ಲಕ್ಕವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವೆ, ಅಂಗನವಾಡಿಗಳನ್ನು ಸರ್ಕಾರಿ ಮಾಂಟೆಸ್ಸರಿ’ಗಳಾಗಿ ಮೇಲ್ದರ್ಜೆಗೇರಿಸುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಇದಲ್ಲದೆ, ಕೇಂದ್ರ ಸರ್ಕಾರವು ಈ ಉಪಕ್ರಮವನ್ನು ಶ್ಲಾಘಿಸಿದೆ ಮತ್ತು ಆರ್ಥಿಕ ಬೆಂಬಲವನ್ನು ನೀಡಿದೆ ಎಂದು ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂತಹ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ. ಈ ಅಂಗನವಾಡಿಗಳಲ್ಲಿನ ಶಿಕ್ಷಕರು ತಮ್ಮ ಶೈಕ್ಷಣಿಕ ಅರ್ಹತೆಯಾಗಿ ಕನಿಷ್ಠ ಪಿಯುಸಿ-II ಅಥವಾ ಪದವಿಯನ್ನು ಪಡೆದಿರಬೇಕು. ಪ್ರಾಯೋಗಿಕ ಯೋಜನೆಯಾಗಿ ಈಗಾಗಲೇ ಬೆಂಗಳೂರಿನಲ್ಲಿ 250 ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಿದ್ದೇವೆ. ಉಳಿದ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಈ ಉಪಕ್ರಮಕ್ಕೆ ಹಣವನ್ನು ಸಕ್ಷಮ್ ಅಂಗನವಾಡಿ ಯೋಜನೆಯಡಿ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಈ ಉದ್ದೇಶಕ್ಕಾಗಿ ಒಂದು ವಾರದಲ್ಲಿ 170 ಕೋಟಿ ರೂ. ನೀಡಲಿದೆ ಎಂದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago