18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ಸಭಾಪತಿ ಯುಟಿ ಖಾದರ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ.
ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ . ಬ್ಯಾಂಕಿಂಗ್ ಕಟ್ಟಡದ ಉದ್ಘಾಟನೆ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ನೆರೆವೇರಿಸಲಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಪ್ರಜ್ವಲನೆಯ ಉದ್ಘಾಟನೆ ಮಾಡಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವೈ ಸುಧಿರ್ ಕುಮಾರ್ ವಹಿಸಲಿದ್ದಾರೆ.ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ.. ಬೆಂಗಳೂರು, ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…