ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ವೈ ಸುಧೀರ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬ್ಯಾಂಕಿಂಗ್ ಕಟ್ಟಡ ಉದ್ಘಾಟನೆ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ನೆರೆವೇರಿಸಲಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಪ್ರಜ್ವಲನೆಯ ಉದ್ಘಾಟನೆ ಮಾಡಲಿದ್ದಾರೆ.
ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ.. ಬೆಂಗಳೂರು, ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.
ಪಡುಬಿದ್ರಿ ಸೊಸೈಟಿ ಸುಮಾರು 124 ಕೋಟಿಯ ಠೇವಣಿ ಹೊಂದಿದ್ದು 85 ಕೋಟಿ ರೂಪಾಯಿಗಳ ಸಾಲ ನೀಡಲಾಗಿದೆ ಶೇಕಡಾ96% ಸಾಲ ಮರುಪಾವತಿಯಾಗಿದೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಸುಮಾರು ಹತ್ತು ಕೋಟಿಯಷ್ಟು ವಿನಿಯೋಗ ಮಾಡಲಾಗಿದೆಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಪು ದಿವಾಕರ ಶೆಟ್ಟಿ, ಶೈಕ್ಷಣಿಕ ಸಾಧಕಿ ಡಾ ಹರ್ಷಿತ ಎನ್ ಅಂಚನ್, ಕ್ರೀಡಾ ಸಾಧಕ ಧನುಷ್ ಎಸ್ ಸಾಲ್ಯಾನ್‌ರನ್ನು ಸನ್ಮಾನಿಸಲಾಗುವುದು.
ಪರಿಕರ ವಿತರಣೆ : ನಮ್ಮ ಸೊಸೈಟಿ ವ್ಯಾಪ್ತಿಯ ಕರಾವಳಿಯನ್ನು ನಿರಂತರವಾಗಿ ಸ್ವಚ್ಛಗೊಳಿಸಿ ಉತ್ತಮ ಸಮಾಜ ಸೇವೆಗೈಯ್ಯುತ್ತಿರುವ ಹೆಜಮಾಡಿ ಕರಾವಳಿ ಯುವಕ – ಯುವತಿ ವೃಂದ ಮತ್ತು ಪಡುಬಿದ್ರಿ ನಡಿಪಟ್ಟ ಕರಾವಳಿ ಸ್ಟಾರ್ ಸಂಸ್ಥೆಗಳಿಗೆ ಸ್ವಚ್ಚತಾ ಪರಿಕರಗಳನ್ನು ವಿತರಿಸಲಾಗುವುದು.
ವಿಶೇಷ ಬಹುಮಾನ : ಫೆ. 5 ರಿಂದ ಮಾರ್ಚ್ ಅಂತ್ಯದವರೆಗೆ ಸೊಸೈಟಿಯಲ್ಲಿ ಠೇವಣಿ ವಿನಿಯೋಗಿಸುವ ಠೇವಣಿದಾರರಿಗೆ
ಹಾಗೂ ಚಿನ್ನಾಭರಣ ಸಾಲ ಪಡೆಯುವ ಸಾಲಗಾರರಿಗೆ ಲಕ್ಕಿ ಕೂಪನ್ ವಿತರಿಸಲಾಗುತ್ತಿದ್ದು, ಉದ್ಘಾಟನಾ ಸಮಾರಂಭದಂದು ಕೂಡಾ ದಿನಾಂಕ 17/02/2024 ರವರೆಗೆ ವಿತರಿಸಿರುವ ಲಕ್ಕಿ ಕೂಪನ್‌ಗಳ ಡ್ರಾ ಮೂಲಕ 10 ವಿಜೇತರನ್ನು ಗಣ್ಯರು ಆಯ್ಕೆ ಮಾಡಲಿದ್ದಾರೆ. ಮಾರ್ಚ್ 31 ರವರೆಗೆ ಈ ಅವಕಾಶ ಕಲ್ಪಿಸಲಾಗಿದ್ದು, ಎಪ್ರಿಲ್ 3 ರಂದು ವಿಜೇತರನ್ನು ಆಯ್ಕೆಮಾಡಿ ಬಹುಮಾನ ನೀಡಲಾಗುವುದು, ಅತ್ಯಧುನಿಕ ಭದ್ರತಾ ಕೊಠಡಿ, ನವೀಕೃತ ಹೆಜಮಾಡಿ ಶಾಖೆಯಲ್ಲಿ ಅತ್ಯಾಧುನಿಕ ಹಾಗೂ ಬೃಹತ್ ಗಾತ್ರದ ಭದ್ರತಾ ಕೊಠಡಿ ಆಳವಡಿಸಲಾಗಿದ್ದು, ಭದ್ರತಾ ಕೊಠಡಿಯಲ್ಲಿ ಆಧುನಿಕ ತಂತ್ರಜ್ಞಾನ ಆಳವಡಿಸಲಾಗಿದೆ ಎಂದು ಅವರು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಗುರುರಾಜ್ ಪೂಜಾರಿ, ರಸೂಲ್ ವೈ.ಜಿ ಶ್ರೀ ಗಿರೀಶ್ ಪಲಿಮಾರ್ ಶ್ರೀ ಶಿವರಾಮ ಎನ್. ಶೆಟ್ಟಿ ಶ್ರೀ ರಾಜಾರಾಮ್ ರಾವ್ ಶ್ರೀ ವಾಸುದೇವ ದೇವಾಡಿಗ ಶ್ರೀ ಯಶವಂತ್ ಪಿ.ಬಿ. ಶ್ರೀ ಮಾಧವ ಆಚಾರ್ಯ ಶ್ರೀ ಸ್ಪ್ಯಾನಿ ಕ್ವಾಡ್ರಸ್ ಶ್ರೀಮತಿ ಸುಚರಿತ ಎಲ್. ಅಮೀನ್ ಶ್ರೀಮತಿ ಕುಸುಮಾ ಎಮ್. ಕರ್ಕೇರ ಶ್ರೀಮತಿ ಕಾಂಚನ ,ಶ್ರೀ ಬಾಲಗೋಪಾಲ್ ಬಲ್ಲಾಳ್ ಕೆ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್ ಉಪಸ್ಥಿತರಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…