ಉಡುಪಿ

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್ vishwanews24

18 ಫೆಬ್ರವರಿ ಭಾನುವಾರ- ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ- ಹೆಜಮಾಡಿ ಶಾಖೆ ಉದ್ಘಾಟನೆ : ವೈ ಸುಧೀರ್ ಕುಮಾರ್

ಚಿನ್ನಾಭರಣ ಸಾಲ ಮತ್ತು ಠೇವಣಿದಾರರಿಗೆ ಲಕ್ಕಿ ಕೂಪನ್ ವಿತರಣೆ : vishwanews24

ಪಡುಬಿದ್ರಿ: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ನೂತನ ನವೀಕೃತ ಹವಾನಿಯಂತ್ರಿತ ಹೆಜಮಾಡಿ ಶಾಖೆಯ ಉದ್ಘಾಟನಾ ಕಾರ್ಯಕ್ರಮ ಫೆಬ್ರವರಿ18 ಭಾನುವಾರ ಪೂರ್ವಾಹ್ನ 10 ಗಂಟೆಗೆ ನಡೆಯಲಿದೆ ಎಂದು ಬ್ಯಾಂಕಿನ ಅಧ್ಯಕ್ಷ ವೈ ಸುಧೀರ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬ್ಯಾಂಕಿಂಗ್ ಕಟ್ಟಡ ಉದ್ಘಾಟನೆ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ನೆರೆವೇರಿಸಲಿದ್ದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೀಪ ಪ್ರಜ್ವಲನೆಯ ಉದ್ಘಾಟನೆ ಮಾಡಲಿದ್ದಾರೆ.
ಸ್ಥಳೀಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನಚಂದ್ರ ಡಿ ಸುವರ್ಣ, ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ. ಬೆಂಗಳೂರು, ಡಾ| ಐಕಳಬಾವ ದೇವಿಪ್ರಸಾದ್ ಶೆಟ್ಟಿ, ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ.. ಬೆಂಗಳೂರು, ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.
ಪಡುಬಿದ್ರಿ ಸೊಸೈಟಿ ಸುಮಾರು 124 ಕೋಟಿಯ ಠೇವಣಿ ಹೊಂದಿದ್ದು 85 ಕೋಟಿ ರೂಪಾಯಿಗಳ ಸಾಲ ನೀಡಲಾಗಿದೆ ಶೇಕಡಾ96% ಸಾಲ ಮರುಪಾವತಿಯಾಗಿದೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಸುಮಾರು ಹತ್ತು ಕೋಟಿಯಷ್ಟು ವಿನಿಯೋಗ ಮಾಡಲಾಗಿದೆಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕಾಪು ದಿವಾಕರ ಶೆಟ್ಟಿ, ಶೈಕ್ಷಣಿಕ ಸಾಧಕಿ ಡಾ ಹರ್ಷಿತ ಎನ್ ಅಂಚನ್, ಕ್ರೀಡಾ ಸಾಧಕ ಧನುಷ್ ಎಸ್ ಸಾಲ್ಯಾನ್‌ರನ್ನು ಸನ್ಮಾನಿಸಲಾಗುವುದು.

ಪರಿಕರ ವಿತರಣೆ : ನಮ್ಮ ಸೊಸೈಟಿ ವ್ಯಾಪ್ತಿಯ ಕರಾವಳಿಯನ್ನು ನಿರಂತರವಾಗಿ ಸ್ವಚ್ಛಗೊಳಿಸಿ ಉತ್ತಮ ಸಮಾಜ ಸೇವೆಗೈಯ್ಯುತ್ತಿರುವ ಹೆಜಮಾಡಿ ಕರಾವಳಿ ಯುವಕ – ಯುವತಿ ವೃಂದ ಮತ್ತು ಪಡುಬಿದ್ರಿ ನಡಿಪಟ್ಟ ಕರಾವಳಿ ಸ್ಟಾರ್ ಸಂಸ್ಥೆಗಳಿಗೆ ಸ್ವಚ್ಚತಾ ಪರಿಕರಗಳನ್ನು ವಿತರಿಸಲಾಗುವುದು.

ವಿಶೇಷ ಬಹುಮಾನ : ಫೆ. 5 ರಿಂದ ಮಾರ್ಚ್ ಅಂತ್ಯದವರೆಗೆ ಸೊಸೈಟಿಯಲ್ಲಿ ಠೇವಣಿ ವಿನಿಯೋಗಿಸುವ ಠೇವಣಿದಾರರಿಗೆ
ಹಾಗೂ ಚಿನ್ನಾಭರಣ ಸಾಲ ಪಡೆಯುವ ಸಾಲಗಾರರಿಗೆ ಲಕ್ಕಿ ಕೂಪನ್ ವಿತರಿಸಲಾಗುತ್ತಿದ್ದು, ಉದ್ಘಾಟನಾ ಸಮಾರಂಭದಂದು ಕೂಡಾ ದಿನಾಂಕ 17/02/2024 ರವರೆಗೆ ವಿತರಿಸಿರುವ ಲಕ್ಕಿ ಕೂಪನ್‌ಗಳ ಡ್ರಾ ಮೂಲಕ 10 ವಿಜೇತರನ್ನು ಗಣ್ಯರು ಆಯ್ಕೆ ಮಾಡಲಿದ್ದಾರೆ. ಮಾರ್ಚ್ 31 ರವರೆಗೆ ಈ ಅವಕಾಶ ಕಲ್ಪಿಸಲಾಗಿದ್ದು, ಎಪ್ರಿಲ್ 3 ರಂದು ವಿಜೇತರನ್ನು ಆಯ್ಕೆಮಾಡಿ ಬಹುಮಾನ ನೀಡಲಾಗುವುದು, ಅತ್ಯಧುನಿಕ ಭದ್ರತಾ ಕೊಠಡಿ, ನವೀಕೃತ ಹೆಜಮಾಡಿ ಶಾಖೆಯಲ್ಲಿ ಅತ್ಯಾಧುನಿಕ ಹಾಗೂ ಬೃಹತ್ ಗಾತ್ರದ ಭದ್ರತಾ ಕೊಠಡಿ ಆಳವಡಿಸಲಾಗಿದ್ದು, ಭದ್ರತಾ ಕೊಠಡಿಯಲ್ಲಿ ಆಧುನಿಕ ತಂತ್ರಜ್ಞಾನ ಆಳವಡಿಸಲಾಗಿದೆ ಎಂದು ಅವರು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಗುರುರಾಜ್ ಪೂಜಾರಿ, ರಸೂಲ್ ವೈ.ಜಿ ಶ್ರೀ ಗಿರೀಶ್ ಪಲಿಮಾರ್ ಶ್ರೀ ಶಿವರಾಮ ಎನ್. ಶೆಟ್ಟಿ ಶ್ರೀ ರಾಜಾರಾಮ್ ರಾವ್ ಶ್ರೀ ವಾಸುದೇವ ದೇವಾಡಿಗ ಶ್ರೀ ಯಶವಂತ್ ಪಿ.ಬಿ. ಶ್ರೀ ಮಾಧವ ಆಚಾರ್ಯ ಶ್ರೀ ಸ್ಪ್ಯಾನಿ ಕ್ವಾಡ್ರಸ್ ಶ್ರೀಮತಿ ಸುಚರಿತ ಎಲ್. ಅಮೀನ್ ಶ್ರೀಮತಿ ಕುಸುಮಾ ಎಮ್. ಕರ್ಕೇರ ಶ್ರೀಮತಿ ಕಾಂಚನ ,ಶ್ರೀ ಬಾಲಗೋಪಾಲ್ ಬಲ್ಲಾಳ್ ಕೆ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ನಿಶ್ಮಿತಾ ಪಿ.ಎಚ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago