ನವದೆಹಲಿ : ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದಲ್ಲಿ ಸಹ-ಪೈಲಟ್ ನಡೆಸಿದ ದಾಳಿಯ ಪ್ರಯತ್ನವನ್ನು ವಿಫಲಗೊಳಿಸುವ ಮೂಲಕ 180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ ‘ಮ್ಯಾನ್‌ಕೈಂಡ್ ಫಾರ್ಮಾ’ ಕಂಪನಿಯು 1 ಕೋಟಿ ರೂ. ಘೋಷಿಸಿದೆ.
ದುಬೈ-ಟೆಲ್ ಅವಿವ್ ನಡುವೆ ಸಂಚರಿಸುತ್ತಿದ್ದ ಫ್ಲೈದುಬೈ ವಿಮಾನವನ್ನು ಪತನಗೊಳಿಸುವ ಪ್ರಯತ್ನ ನಡೆದಿತ್ತು. ಸಹ-ಪೈಲಟ್‌ನಿಂದ ಚಾಕು ಇರಿತಕ್ಕೆ ಒಳಗಾಗಿದ್ದರೂ ಮಚ್ಚಾರ್ ವಿಮಾನ ಸುರಕ್ಷಿತವಾಗಿ ಸೌದಿಯಲ್ಲಿ ಲ್ಯಾಂಡ್ ಆಗುವಂತೆ ನೋಡಿಕೊಂಡರು. ಅವರ ಧೈರ್ಯ ಮತ್ತು ಮಾನವೀಯತೆಯನ್ನು ಮೆಚ್ಚಿ, ಕೃತಜ್ಞತೆಯ ಸಂಕೇತವಾಗಿ 1 ಕೋಟಿ ರೂಪಾಯಿ ನೀಡಿ ಫಾರ್ಮಾ ಕಂಪನಿಯು ಗೌರವ ಸಲ್ಲಿಸಿದೆ.
“ಒಬ್ಬ ಭಾರತೀಯನಾಗಿ, ಇಡೀ ಜಗತ್ತಿನ ಮುಂದೆ ಒಬ್ಬ ಭಾರತೀಯ ಇಂತಹ ಧೈರ್ಯ, ಮಾನವೀಯತೆ ಮತ್ತು ಜವಾಬ್ದಾರಿಯನ್ನು ಪ್ರದರ್ಶಿಸುವುದನ್ನು ನೋಡಿ ನನಗೆ ಅಪಾರ ಹೆಮ್ಮೆ ಎನಿಸುತ್ತಿದೆ. ನೀವು ರಕ್ಷಿಸಿದ ಜೀವಗಳ ಮೌಲ್ಯಕ್ಕಾಗಲಿ ಅಥವಾ ಲಕ್ಷಾಂತರ ಜನರಿಗೆ ನೀವು ನೀಡಿದ ಸ್ಫೂರ್ತಿಗಾಗಲಿ ಯಾವುದೇ ಹಣದ ಮೊತ್ತಕ್ಕೆ ಸಮವಾಗಲಾರದು. ನಿಮ್ಮ ಧೈರ್ಯ ಮತ್ತು ಮಾನವೀಯತೆಯ ಕುರಿತಾದ ನಮ್ಮ ಅಪಾರ ಗೌರವ, ಕೃತಜ್ಞತೆ ಮತ್ತು ಮೆಚ್ಚುಗೆಯ ಒಂದು ಸಣ್ಣ ಅಭಿವ್ಯಕ್ತಿ ಮಾತ್ರವೇ ಈ ಕೊಡುಗೆಯಾಗಿದೆ” ಎಂದು ಮ್ಯಾನ್‌ಕೈಂಡ್ ಫಾರ್ಮಾದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ರಾಜೀವ್ ಜುನೇಜಾ ಅವರು ಮಚ್ಚಾರ್ ಅವರಿಗೆ ಪತ್ರ ಬರೆದಿದ್ದಾರೆ.
“ಕ್ಯಾಪ್ಟನ್ ಸ್ಮಿತ್.. ಒಬ್ಬ ಭಾರತೀಯರಾಗಿ ನಾವು ನಿಮಗೆ ನಮಸ್ಕರಿಸುತ್ತೇವೆ. ನೀವು ಇಡೀ ದೇಶವೇ ಹೆಮ್ಮೆಪಡುವಂತೆ ಮಾಡಿದ್ದೀರಿ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…