Featured

1984ರ ಸಿಖ್ ವಿರೋಧಿ ದಂಗೆ ಪ್ರಕರಣ : 34 ವರ್ಷಗಳ ನಂತರ ಮಹತ್ವದ ತೀರ್ಪು ; ಕಾಂಗ್ರೆಸ್​ ನಾಯಕ ಸಜ್ಜನ್ ಕುಮಾರ್​ಗೆ ಜೀವವಾಧಿ ಶಿಕ್ಷೆ

ದೆಹಲಿ: 1984ರ ಸಿಖ್​ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ 34 ವರ್ಷಗಳ ನಂತರ ಮಹತ್ವದ ತೀರ್ಪು ಹೊರಬಿದ್ದಿದ್ದು,  ಕಾಂಗ್ರೆಸ್​ ನಾಯಕ ಸಜ್ಜನ್​ ಕುಮಾರ್ ದೋಷಿ ಎಂದು ದೆಹಲಿ ಹೈಕೋರ್ಟ್​​ ತೀರ್ಪು ನೀಡಿದೆ.

ಈ ಸಂಬಂಧಪಟ್ಟಂತೆ ಡಿ.17ರ ಸೋಮವಾರ ದೆಹಲಿ ಹೈಕೋರ್ಟ್ ಸಜ್ಜನ್ ಅವರಿಗೆ ರಾಜಕೀಯ ಪ್ರೋತ್ಸಾಹ ಸಿಕ್ಕಿರುವುದಾಗಿ ಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪಿಗೆ ಹರ್ಷ ವ್ಯಕ್ತಪಡಿಸಿರುವ ಅರ್ಜಿದಾರೆ ಚಮನ್ ಕೌರ್, ನನ್ನ ತಂದೆಯನ್ನು ಸಿಖ್ ಎನ್ನುವ ಕಾರಣಕ್ಕೆ ಜೀವಂತ ದಹಿಸಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಸಜ್ಜನ್​ ಕುಮಾರ್​ಗೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ತೀರ್ಪು ಪ್ರಕಟಿಸಿದೆ. 1984ರ ಅಕ್ಟೋಬರ್​ 31ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಬಳಿಕ ದೆಹಲಿ ಕಂಟೋನ್​ಮೆಂಟ್​ ಏರಿಯಾದಲ್ಲಿ ಗಲಭೆ ನಡೆದು ಐವರನ್ನು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್​​ ಮುರಳೀಧರ್​ ಹಾಗೂ ನ್ಯಾ. ವಿನೋದ್​ ಗೋಯಲ್​​ ಅವರ ಪೀಠ ಇಂದು ತೀರ್ಪು ಪ್ರಕಟಿಸಿದೆ. ಡಿಸೆಂಬರ್​ 31ರ ಒಳಗೆ ಸಜ್ಜನ್​ ಕುಮಾರ್​​ ಶರಣಾಗಬೇಕಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

17 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

18 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago