Featured

2ನೇ ಏಕದಿನ ಪಂದ್ಯಾಟ: ಕಿವೀಸ್ ವಿರುದ್ಧ ಭಾರತ ತಂಡಕ್ಕೆ 90 ರನ್ ಗಳ ಭರ್ಜರಿ ಗೆಲುವು – Vishwanews24

ನೇಪಿಯರ್: ಆತಿಥೇಯ ನ್ಯೂಜಿಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲೂ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದ್ದು, ವಿಲಿಯಮ್ಸನ್ ಪಡೆ ವಿರುದ್ಧ ಭರ್ಜರಿ 90 ರನ್ ಗಳ ಜಯ ದಾಖಲಿಸಿದೆ.
ನೇಪಿಯರ್ ನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 325 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ನ್ಯೂಜಿಲೆಂಡ್ ತಂಡ ಕೇವಲ 234 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೊಹ್ಲಿ ಪಡೆ ಎದುರು 90 ರನ್ ಗಳ ಅಂತರದಲ್ಲಿ ಮಂಡಿಯೂರಿತು.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡವು ಉತ್ತಮ ಆರಂಭವನ್ನೇ ಪಡೆಯಿತು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಮೊದಲ ವಿಕೆಟ್ ಗೆ 154 ರನ್ ಜೊತೆಯಾಟ ನಡೆಸಿದರು. ರೋಹಿತ್ ಶರ್ಮಾ 87 ರನ್, ಶಿಖರ್ ಧವನ್ 66 ರನ್, ನಾಯಕ ವಿರಾಟ್ ಕೊಹ್ಲಿ 43, ಮಹೇಂದ್ರ ಸಿಂಗ್ ಧೋನಿ 47 ಹಾಗೂ ಕೇದಾರ್ ಜಾಧವ್ 22 ರನ್ ಗಳಿಸಿ ತಂಡದ ಮೊತ್ತವನ್ನು 324ಕ್ಕೇರಿಸಿದರು. ಕಿವೀಸ್ ಉತ್ತಮ ಆರಂಭ ಪಡೆಯಿತಾದರೂ ಮಧ್ಯಮ ಕ್ರಮಾಂಕ ವಿಫಲವಾಯಿತು. ಭಾರತದ ಪರ ಕುಲದೀಪ್ ಯಾದವ್ 4 ವಿಕೆಟ್ ಗಳಿಸಿರು.
ಪ್ರಮುಖವಾಗಿ ಭಾರತದ ಕುಲದೀಪ್ ಯಾದವ್ ಅವರ ಮಾರಕ ಬೌಲಿಂಗ್ ದಾಳಿಗೆ ಕಿವೀಸ್ ಪಡೆ ಅಕ್ಷರಶಃ ಪತರುಗುಟ್ಟಿತ್ತು. ಮಧ್ಯಮ ಕ್ರಮಾಂಕದಲ್ಲಿ ಬ್ರೇಸ್ ವೆಲ್ ಅರ್ಧಶತಕ ಸಿಡಿಸಿ ಪ್ರತಿರೋಧ ತೋರಿದರಾದರೂ ಅವರಿಗೆ ತಂಡದ ಇತರೆ ಆಟಗಾರರಿಂದ ಉತ್ತಮ ಸಾಥ್ ದೊರೆಯಲಿಲ್ಲ. ಪರಿಣಾಮ ನ್ಯೂಜಿಲೆಂಡ್ ತಂಡ 40.2 ಓವರ್ ಗಳಲ್ಲಿ ಕೇವಲ 234 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.
ಆ ಮೂಲಕ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ ಭಾರತ 2-0 ಅಂತರದ ಮುನ್ನಡೆ ಸಾಧಿಸಿದ್ದು, ಉಳಿದಿರುವ ಮೂರು ಪಂದ್ಯಗಳಲ್ಲಿ ಒಂದನ್ನು ಗೆದ್ದರೂ ಸರಣಿ ಭಾರತದ ಕೈವಶವಾಗಲಿದೆ.
Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago