Featured

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್‌ – vishwanews24

2ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ : ಕಾಮುಕ ಅರೆಸ್ಟ್‌

ರಾಯಚೂರು: 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಾಮುಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ರಾಯಚೂರು  ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ನಡೆದಿದೆ.

ಖಾಸಗಿ ಶಾಲೆಯ 7 ವರ್ಷದ ವಿದ್ಯಾರ್ಥಿನಿ  ಮೇಲೆ ಕಾಮುಕ ಅಟ್ಟಹಾಸ ಮೆರೆದಿದ್ದಾನೆ. ಮಾನ್ವಿ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ಬಾಲಕಿಯ ಗ್ರಾಮದವನೇ ಆದ ಶಿವನಗೌಡ ಬಂಧಿತ ಆರೋಪಿ. ನಿತ್ಯ ಸ್ಕೂಲ್ ಬಸ್‌ನಲ್ಲಿ ಶಾಲೆಗೆ ವಿದ್ಯಾರ್ಥಿನಿ ಬರುತ್ತಿದ್ದಳು. ಈ ವೇಳೆ ಆರೋಪಿ ಬಂದು ವಿದ್ಯಾರ್ಥಿನಿಯನ್ನ ಹೊರಗಡೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಅಂತ ಆರೋಪಿಸಲಾಗಿದೆ.

ತಮಗೆ ಮಾಹಿತಿ ನೀಡದೆ ಅಪರಿಚಿತನೊಂದಿಗೆ ಮಗಳನ್ನ ಕಳುಹಿಸಿದ್ದಕ್ಕೆ ಪೋಷಕರು ಶಾಲಾ ವ್ಯವಸ್ಥಾಪಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ವ್ಯವಸ್ಥಾಪಕನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯನ್ನ ಮಾನ್ವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago