ಮುಂಬೈ : ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.
ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್ ಆಗಿತ್ತು.ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲು ಪೈಲಟ್ ಪ್ರಯತ್ನಿಸಿದ್ದಾರೆ.
ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಎರಡನೇ ಬಾರಿ ವಿಮಾನ ಲ್ಯಾಂಡಿಂಗ್ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು ಪ್ರಯತ್ನಿಸಿದ್ದಾರೆ. ಆದರೆ ಈ ಪ್ರಯತ್ನ ವಿಫಲವಾಗಿ ವಿಮಾನ ಪತನಗೊಂಡಿದೆ.
16 ವರ್ಷ ಹಳೆಯದಾದ ವಿಮಾದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ. ಕಳಪೆ ಗೋಚರತೆಯಿಂದ ವಿಮಾನ ಪತನಗೊಂಡಿದೆ ಎಂದು ವಿಮಾನ ನಿರ್ವಾಹಕ ಕಂಪನಿ ವಿಎಸ್ಆರ್ ವೆಂಚರ್ಸ್ ಹೇಳಿದೆ. ವಿಮಾನ ರನ್‌ವೇ ಬಳಿಯೇ ಹಾರುತ್ತಿತ್ತು.ರನ್‌ವೇ ಸಮೀಪಿಸಲು ಇನ್ನೇನು 100 ಅಡಿ ಇದ್ದಾಗ ಪತನಗೊಂಡು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.
ವಿಮಾನ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಳ್ಳುವುದನ್ನು ನೋಡಿದ ಕೂಡಲೇ ನಾವು ಸ್ಥಳಕ್ಕೆ ಧಾವಿಸಿ ಪ್ರಯಾಣಿಕರನ್ನು ಹೊರಗೆ ತೆಗೆಯಲು ಪ್ರಯತ್ನಪಟ್ಟೆವು. ಆದರೆ ಬೆಂಕಿಯ ಜ್ವಾಲೆಯಿಂದ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…