ಬೆಂಗಳೂರು: 2 ಕೋಟಿ ಡೋಸ್ ಕೋವಿಡ್ ಲಸಿಕೆ ಹಾಕುವ ಮೂಲಕ ದಕ್ಷಿಣ ಭಾರತ ರಾಜ್ಯಗಳಲ್ಲೇ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ.
ಕಳೆದ 22 ವಾರಗಳಲ್ಲಿ ಈ ಸಾಧನೆ ಮಾಡಿರುವ ರಾಜ್ಯವು ಜನಸಂಖ್ಯೆಯ ಶೇಕಡಾ 25 ರಷ್ಟು ಜನರಿಗೆ ಕೊರೊನಾ ಲಸಿಕೆ ವಿತರಿಸಿದೆ. ಲಸಿಕೆ ವಿತರಣೆ ಕುರಿತು ಆರೋಗ್ಯ ಸಚಿವ ಕೆ ಸುಧಾಕರ್ ಈ ಮಾಹಿತಿ ಹಂಚಿಕೊಂಡಿದ್ದಾರೆ. ಡಿಸೆಂಬರ್ 2021 ರೊಳಗೆ ಎಲ್ಲ ವಯಸ್ಕರಿಗೂ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಎರಡು ಲಸಿಕೆ ನೀಡುವ ಅಂತರವನ್ನು ಇತ್ತೀಚೆಗೆ ಪರಿಷ್ಕರಿಸಲಾಗಿತ್ತು. ಹೀಗಾಗಿ ಎರಡು ಡೋಸ್ ಪಡೆದವರ ಸಂಖ್ಯೆ ಕಡಿಮೆ ಆಗಿದೆ. ಈ ವರೆಗೆ 32 ಲಕ್ಷ ಜನ ಎರಡನೇ ಡೋಸ್ ಪಡೆದಿದ್ದಾರೆ.
ಈವರೆಗೆ 1.70 ಕೋಟಿಗೂ ಹೆಚ್ಚು ಕೋವಿಶೀಲ್ಡ್ ಲಸಿಕೆ ಮತ್ತು 20 ಲಕ್ಷ ಕೋವಾಕ್ಸಿನ್ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಮಹಿಳೆಯರಿಗಿಂತ ಪುರುಷರು ಹೆಚ್ಚಿನ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
ಮಂಗಳವಾರದ ಅಂತ್ಯಕ್ಕೆ ರಾಜ್ಯದಲ್ಲಿ 1,99,12,833 ಡೋಸ್ ಲಸಿಕೆ ನೀಡಲಾಗಿದ್ದು, 2 ಕೋಟಿ ಅಂಚಿಗೆ ತಲುಪಿದೆ. ಬುಧವಾರದ ವೇಳೆಗೆ ಇದು ಅಧಿಕೃತವಾಗಿ 2 ಕೋಟಿಯನ್ನು ದಾಟಲಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…