ಉಡುಪಿ /ದಕ್ಷಿಣ ಕನ್ನಡ :ಹತ್ತು ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರದ ವಿರುದ್ಧ ನೀಡಿರುವ ೨ ದಿನಗಳ ಭಾರತ್ ಬಂದ್‌ಗೆ ಕರೆ ದ.ಕ ಜಿಲ್ಲೆಯಲ್ಲಿ 2ನೇ ದಿನ ನೀರಸ ಪ್ರಕ್ರಿಯೆ ವ್ಯಕ್ತವಾಗಿದೆ.
ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬುಧವಾರವೂ ಬಂದ್ ಗೆ ಕರೆ ನೀಡಲಾಗಿದ್ದರೂ ದ.ಕ ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಿಲ್ಲ. ಈ ಹಿನ್ನಲೆಯಲ್ಲಿ ಎಂದಿನಂತೆ ಶಾಲಾ, ಕಾಲೇಜುಗಳಿಗೆ ವಿದ್ಯಾರ್ಥಿಗಳುತೆರಳುತ್ತಿದ್ದಾರೆ.
ಕರಾವಳಿಯ ಲೈಫ್ ಲೈನ್ ಎಂದೇ ಕರೆಯಲಾಗುವ ಖಾಸಗಿ ಎಕ್ಸ್‌ಪ್ರೆಸ್, ಸರ್ವಿಸ್ ಹಾಗೂ ಸಿಟಿ ಬಸ್ ಗಳು ಇಂದು ಮುಂಜಾನೆಯಿಂದ ಎಂದಿನಂತೆ ಸಂಚಾರ ಆರಂಭಿಸಿವೆ. ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಬಸ್ ಮಾಲೀಕರ ಸಂಘ ಬೆಂಬಲ ನೀಡಿರಲಿಲ್ಲ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಶಾಲಾ, ಕಾಲೇಜುಗಳು ಎಂದಿನಂತೆ ಆರಂಭವಾಗಿವೆ. ವಾಹನ ಸಂಚಾರಎಂದಿನಂತೆ ಆರಂಭಗೊಂಡಿದೆ. ಖಾಸಗಿ ಬಸ್ ಗಳು ಹಾಗೂ ಕೆ ಎಸ್ ಆರ್ ಟಿಸಿ ಬಸ್ ಗಳು ರಸ್ತೆಗಿಳಿದಿದ್ದು, ಆಟೋ ರಿಕ್ಷಗಳು ಎಂದಿನಂತೆ ಸಂಚಾರ ಆರಂಭಿಸಿದೆ.ಅಂಗಡಿ, ಮಳಿಗೆ, ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಬ್ಯಾಂಕ್ ಸಿಬ್ಬಂದಿ ಮುಷ್ಕರಕ್ಕೆ ಬೆಂಬಲ ಸೂಚಿಸಿರುವುದರಿಂದ ಸೇವೆ ಭಾಗಶಃ ವ್ಯತ್ಯಯಗೊಂಡಿದೆ. ಮಾಲ್ ಗಳು, ಚಿತ್ರಮಂದಿರಗಳು,ಪೆಟ್ರೋಲ್ ಬಂಕ್ ಗಳು, ಮೆಡಿಕಲ್ ಶಾಪ್ ಸಹಿತ ಅಗತ್ಯ ವಸ್ತು, ಸೇವೆ ಸಾಮಾನ್ಯವಾಗಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…